ಸ್ವಾತಂತ್ರ್ಯ ಹೋರಾಟಗಾರರಿಗೆ ಸೈಕಲ್ ಯಾತ್ರೆ ಮೂಲಕ ನಮನ

ಸುರಪುರ: ದೇಶ ಸ್ವಾತಂತ್ರ್ಯಗೊಂಡು ೭೫ ವರ್ಷಗೊಂಡು ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಿರಿಯ ವಯಸ್ಸಿನ ಬಾಲಕರಿಬ್ಬರು ದೇಶ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಹೋರಾಟಗಾರರಿಗೆ ವಿಶಿಷ್ಟವಾಗಿ ನಮನ ಸಲ್ಲಿಸಲು ಮುಂದಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಬೀದರ ಜಿಲ್ಲೆಯ ಔರಾದ ಪಟ್ಟಣದ ೧೬ ವರ್ಷದ ಅವಳಿ ಸಹೋದರರಾದ ಅರುಣ ರ‍್ಯಾಕಲೆ ಮತ್ತು ಕರುಣ ರ‍್ಯಾಕಲೆ ಈಗ ಸೈಕಲ್ ಯಾತ್ರೆಯನ್ನು ಆರಂಭಿಸಿದ್ದಾರೆ.ಕಳೆದ ೫ ದಿನಗಳ ಹಿಂದೆ ಔರಾದ ಪಟ್ಟಣದ ಅಮರೇಶ್ವರ ದೇವಸ್ಥಾನದಿಂದ ಚಾಮರಾಜನಗರದ ಮಲೆ ಮಾದೇಶ್ವರ ದೇವಸ್ಥಾನದ ವರೆಗೆ ದಿನಕ್ಕೆ ೫೦ ಕಿಲೋ ಮೀಟರ್‌ನಂತೆ ಸೈಕಲ್ ಯಾತ್ರೆಯನ್ನು ಹೊರಟು ಸ್ವಾತಂತ್ರ್ಯ ಹೋರಾಟಗಾರರನ್ನು ನಮಿಸುವ ಸಾಹಸಕ್ಕೆ ಮುಂದಾಗಿದ್ದಾರೆ.

ಸೈಕಲ್ ಯಾತ್ರೆ ಶುಕ್ರವಾರ ಮುಂಜಾನೆ ಸುರಪುರ ನಗರಕ್ಕೆ ಆಗಮಿಸುತ್ತಿದ್ದಂತೆ ದಾರಿಯುದ್ದಕ್ಕೂ ಎಲ್ಲಾ ಗ್ರಾಮಗಳ ಜನರು ಬಾಲಕರಿಗೆ ಹೂಮಾಲೆ ಹಾಕಿ ಸನ್ಮಾನಿಸಿ ಯಾತ್ರೆಗೆ ಶುಭ ಹಾರೈಸಿದ್ದಾರೆ.ಸುರಪುರ ನಗರದಲ್ಲಿ ರಾಮ್ ಸೇನಾ ಸಂಘಟನೆ ಸೇರಿದಂತೆ ಅನೇಕ ದೇಶಭಕ್ತರು ಬಾಲಕರಿಗೆ ಸನ್ಮಾನಿಸುವ ಜೊತೆಗೆ ನಗರದಲ್ಲಿಯೇ ಸಂಜೆಯವರರೆಗೂ ಉಳಿದುಕೊಳ್ಳಲು ನೆರವಾಗಿದ್ದಾರೆ.

ತಮ್ಮ ಯಾತ್ರೆಯ ಕುರಿತು ಬಾಲಕರು ಮಾತನಾಡಿ,ನಮಗೆ ಭಗತ್‌ಸಿಂಗ್ ಆದರ್ಶವಾಗಿದ್ದಾರೆ.ಅಲ್ಲದೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಪ್ರಾಣವನ್ನೇ ಕೊಟ್ಟಿದ್ದಾರೆ ಅವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ,ಅದನ್ನು ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಸೈಕಲ್ ಯಾತ್ರೆ ಮೂಲಕ ನಮನ ಸಲ್ಲಿಸುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಡಾ:ಉಪೇಂದ್ರ ನಾಯಕ ಸುಬೇದಾರ, ರಾಮ್ ಸೇನಾ ಸಂಘಟನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣು ನಾಯಕ ದೀವಳಗುಡ್ಡ,ಸಿದ್ದು ಚೊಕ್ಕಾ, ಸತ್ಯಂಪೇಟೆ,ಅಮರೇಶ ಕುಂಬಾರ,ಮರೆಪ್ಪ ದಿವಳಗುಡ್ಡ,ನಿತೀಶಕುಮಾರ ಲಕ್ಷ್ಮೀಪುರ,ಯಲ್ಲಪ್ಪ ತೆಲಗೂರು,ಬಸವರಾಜ ಚಂದನಕೇರಿ,ಕಾಂತಪ್ಪ ಎಲಿಗಾರ,ಕಂಡಪ್ಪ ಎಲಿಗಾರ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago