ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಸರಕೋಡು ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಬ್ಲಡ್ ಬ್ಯಾಂಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ತಂಬ್ರಹಳ್ಳಿ ಮತ್ತು ಸ್ಥಳೀಯ ಸಂಘ-ಸಂಸ್ಥೆಗಳು ಶ್ರೀ ಆಂಜನೇಯ ಸ್ವಾಮಿ ರಥೋತ್ಸವವಾಗಿ ಇಂದು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ಪತ್ರೇಶ್ ಹಿರೇಮಠರವರು ಮಾತನಾಡಿ, ರಕ್ತದಾನ ಮಾಡುವ ಮೂಲಕ ಜನರ ಪ್ರಾಣ ರಕ್ಷಣೆಗೆ ಯುವಜನತೆ ಮುಂದಾಗಬೇಕೆಂದು ಕರೆ ನೀಡಿದರು.
ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವನ್ನು ಕಾಪಾಡಿಕೊಂಡು ಸದೃಢ ಬದುಕನ್ನು ರೂಪಿಸಿಕೊಳ್ಳಬೇಕೆಂದು ಎಂದು ತಂಬ್ರಹಳ್ಳಿ ಪೊಲೀಸ್ ಠಾಣೆಯ ಎ.ಎಸ್.ಐ ಕರಿವೀರಪ್ಪ ಕಬ್ಬೇರ್ ಕಿವಿಮಾತು ಹೇಳಿದರು.
ಬನ್ನಿಗೋಳ ಗ್ರಾಮ ಪಂಚಾಯತಿ ಅಧ್ಯಕ್ಷ ಕರಿಬಸವರಾಜ ಬಣಕಾರ, ರಕ್ತದಾನ ಮಾಡುವ ಮೂಲಕ ಯುವಕರಿಗೆ ರಕ್ತದಾನ ಮಾಡಲು ಪ್ರೇರೇಪಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜ, ಆಶಾ ಕಾರ್ಯಕರ್ತೆಯರಾದ ಪ್ರತಿಭಾ ಕೆ.ಎಂ.ಎಸ್, ಸರಸ್ವತಿ , ವಿವೇಕಾನಂದ ಬ್ಲಡ್ ಬ್ಯಾಂಕ್ ನ ವಿರುಪಾಕ್ಷ, ಆಪ್ತ ಸಮಾಲೋಚಕ ಮಹೇಂದ್ರ, ರಾಜೇಂದ್ರ ಬಾಬು ಹಾಗೂ ಸರ್ಕಾರಿ ಪ್ರೌಢಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ ಎಂ ಶಿವಮೂರ್ತಿ, ಮಾಜಿ ಗ್ರಾ.ಪಂ ಸದಸ್ಯರಾದ ಬಿ.ಸಿ ಬಸವರಾಜ, ಹೆಚ್.ಬಿ. ಮೈಲಪ್ಪ ನಾಗಭೂಷಣ, ಮುಖಂಡರಾದ ಶೇಖರಯ್ಯ ಎಸ್.ಎಂ, ಎ.ಕೆ ಸಾರೆಪ್ಪ ಮಹಾಂತೇಶ್ ಹೊಳಗುಂದಿ, ಧನಂಜಯ ಮೇಟಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…