ಬೀದರ್: ತಾಲ್ಲೂಕಿನ ಬಗದಲ್ ಗ್ರಾಮದ ಉರ್ದು ಮಾಧ್ಯಮ ಸರ್ಕಾರಿ ಪ್ರೌಢಶಾಲೆಗೆ ಕರ್ನಾಟಕ ಉರ್ದು ಅಕ್ಯಾಡೆಮಿಯ ಅಧ್ಯಕ್ಷ ಮುಬಿನ್ ಮುನವರ್ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತರಗತಿಗಳಿಗೆ ಭೇಟಿ ಕೊಟ್ಟು ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರುತ್ತಾರೆಯೇ, ತರಗತಿಗಳು ನಿಯಮಿತವಾಗಿ ನಡೆಯುತ್ತಿವೆಯೇ, ಸರ್ಕಾರದ ವಿವಿಧ ಸೌಲಭ್ಯಗಳು ದೊರೆಯುತ್ತಿವೆಯೇ ಎನ್ನುವ ಕುರಿತು ವಿದ್ಯಾರ್ಥಿಗಳನ್ನು ವಿಚಾರಿಸಿದರು.
ಶಾಲೆಯಲ್ಲಿ ಶೈಕ್ಷಣಿಕ ವಾತಾವರಣ ಚೆನ್ನಾಗಿದೆ. ಶಿಕ್ಷಕರು ಶ್ರದ್ಧೆಯಿಂದ ಪಾಠ ಬೋಧನೆ ಮಾಡುತ್ತಾರೆ. ಪ್ರಶ್ನಾವಳಿ ಮೂಲಕ ಪಾಠದಲ್ಲಿನ ಗೊಂದಲಗಳನ್ನು ನಿವಾರಿಸುತ್ತಾರೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಮುನವರ್ ಅವರು ವಿದ್ಯಾರ್ಥಿಗಳಿಗೆ ಪಠ್ಯದಲ್ಲಿನ ಅನೇಕ ಪ್ರಶ್ನೆಗಳನ್ನು ಕೇಳಿದರು. ಪುಸ್ತಕ ತೆಗೆಸಿ ಪಾಠ ಓದಿಸಿದರು. ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಅವುಗಳ ಲಾಭ ಪಡೆಯಬೇಕು. ಶಿಕ್ಷಕರು ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಪ್ರಯತ್ನಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಅವರು ತಿಳಿಸಿದರು. ಅಕ್ಯಾಡೆಮಿಯ ಸದಸ್ಯರಾದ ಸಾಜೀದ್ ಪಾಶಾ, ಶಾಹೇದ್ ಖಾಜಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…