ಕಲಬುರಗಿ: ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷರಾಗಿ ಲಿಂಗರಾಜ ಸಿರಗಾಪೂರ ಅವರು ನೇಮಕಗೊಂಡಿದ್ದಾರೆ.
ಕಲಬುರಗಿ ನಗರದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಚಿಂತಕರು ಭಾಗವಹಿಸಿ ಸುಧೀರ್ಘ ಸಮಾಲೋಚನೆ ನಡೆಸಿದ ನಂತರ ಕನ್ನಡ ಸಾಹಿತ್ಯ ವೇದಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕಲಬುರಗಿ ಉತ್ತರ ವಲಯದ ನಿಕಟಪೂರ್ವ ಅಧ್ಯಕ್ಷರಾಗಿ ಕೆಲಸ ಮಾಡಿರುವ ಲಿಂಗರಾಜ ಸಿರಗಾಪೂರ ಅವರನ್ನು ವೇದಿಕೆಯ ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ ಸಲಹೆ ನೀಡಿದರು.
ಕನ್ನಡ ಸಾಹಿತ್ಯ ವೇದಿಕೆ ಭಿನ್ನವಾಗಿ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕನ್ನಡ ಭಾಷೆ ಶ್ರೀಮಂತ ಇತಿಹಾಸ ಸಾರಲು ಉತ್ತಮ ಕೆಲಸ ನಿರ್ವಹಿಸಲು ಮುಂದಾಗಬೇಕು ಎಂದು ಸಭೆಯಲ್ಲಿ ತಮ್ಮ ತಮ್ಮ ಅಭಿಪ್ರಾಯ ನೀಡಿದ್ದಾರೆ.
ಶೀಘ್ರದಲ್ಲೇ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತದೆ ಎಂದು ವೇದಿಕೆ ಮುಖಂಡ ಜಿ.ಜಿ.ವಣಿಕ್ಯಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.