ಸಾರ್ವಜನಿಕರ ಸಮಸ್ಯೆಗಳಿಗೆ ಪೊಲೀಸರು ಸಕಾರಾತ್ಮಕವಾಗಿ ಸ್ಪಂದಿಸಬೇಕು: ಡಾ.ವೈಎಸ್. ರವಿಕುಮಾರ್

ಕಲಬುರಗಿ: ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ವಿವಿಧ ಸಮಸ್ಯೆಗಳ ಬಗ್ಗೆ ಬಹಳಷ್ಟು ಭರವಸೆ ಇಟ್ಟುಕೊಂಡು ಬರುತ್ತಾರೆ. ಅವರ ಅಹವಾಲು ಕೇಳಿ ಸಕಾರಾತ್ಮಕ ಸ್ಪಂದಿಸಿ, ಸಂತುಷ್ಟಗೊಳಿಸಬೇಕು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈಎಸ್. ರವಿಕುಮಾರ್ ಅವರು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸೋಮವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ಹಾಗೂ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ೨೦ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ, ಪೆರೇಡ್ ವೀಕ್ಷಿಸಿದ ಬಳಿಕ ಅವರು ಮಾತನಾಡುತ್ತಿದ್ದರು.

ಕಾನೂನು ವಿಷಯ, ಕರ್ತವ್ಯ ನಿರ್ವಹಣೆ, ಅಪರಾಧಗಳ ತನಿಖೆ, ಟ್ರಾಫಿಕ್ ನಿರ್ವಹಣೆ, ಠಾಣೆಯ ರಿಜಿಸ್ಟರ್ ನಿರ್ವಹಣೆ, ಪೊಲೀಸ್ ನಾಯಕತ್ವ ಮುಂತಾದವುಗಳ ವಿಷಯದಲ್ಲಿ ಸುಧೀರ್ಘ ತರಬೇತಿ ಪಡೆದಿದ್ದೀರಿ. ಈ ಮೂಲಕ ನೀವು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಪೊಲೀಸ್ ಠಾಣೆಗಳ ಮಟ್ಟದಲ್ಲಿ ಕರ್ತವ್ಯದ ಬಗ್ಗೆ ಕಲಿಯುವುದು ಬಹಳಷ್ಟು ಇದೆ. ಆದ್ದರಿಂದ ತಪ್ಪದೇ ಪ್ರತಿದಿನ ಠಾಣೆಗಳಿಗೆ ಹಾಜರಾಗಬೇಕು ಎಂದು ತಿಳಿಸಿದ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಇಶಾ ಪಂತ್ ಅವರು ಸ್ವಾಗತಿಸಿ ಮಾತನಾಡುತ್ತಾ, ೮ ತಿಂಗಳುಗಳ ಕಾಲ ತರಬೇತಿ ಪಡೆದಿದ್ದು, ಮುಂದಿನ ದಿನಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ಶುಭಹಾರೈಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪ್ರಸನ್ನ ದೇಸಾಯಿ ಅವರು ವರದಿ ವಾಚನ ಮಾಡಿ, ಕಲಬುರಗಿಯ ತಾತ್ಕಾಲಿಕ ತರಬೇತಿ ಶಾಲೆಯಲ್ಲಿ ಇದುವರೆಗೆ ೨೦ ತಂಡಗಳಲ್ಲಿ ೨೪೪೪ ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆದಿದ್ದಾರೆ ಎಂದು ತಿಳಿಸಿದರು. ೨೦ ನೇ ತಂಡದಲ್ಲಿ ಒಳಾಂಗಣ, ಹೊರಾಂಗಣ ಹಾಗೂ ವಿಶೇಷ ಕರ್ತವ್ಯಗಳ ಕುರಿತು ಅತ್ಯುತ್ತಮ ತರಬೇತಿ ಪಡೆದಿದ್ದು, ದೇಶಕ್ಕೆ ಉತ್ತಮ ಸೇವೆ ಹಾಗೂ ಇಲಾಖೆಗೆ ಒಳ್ಳೆಯ ಹೆಸರು ತರಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು ಪ್ರಶಿಕ್ಷಾಣಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ೨೦ನೇ ತಂಡದ ಪ್ರಶಿಕ್ಷಣಾರ್ಥಿಗಳಿಗೆ ಹೊರಾಂಗಣ, ಒಳಾಂಗಣ, ಫೈರಿಂಗ್ ವಿಭಾಗದ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಮತ್ತು ಸರ್ವೋತ್ತಮ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರು ಮತ್ತು ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಡ್ಡೂರು ಶ್ರೀನಿವಾಸಲು, ಕಲಬುರಗಿ ಕೆಎಸ್‌ಆರ್‌ಪಿ ೬ನೇ ಬೆಟಾಲಿಯನ್‌ನ ಕಮಾಂಡೆಂಟ್ ಬಸವರಾಜ ಜಿಲ್ಲೆ, ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಉಪನಿರ್ದೇಶಕ ಪ್ರವೀಣ್ ಕುಮಾರ್, ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಸಂತೋಷ್ ಪಾಟೀಲ್, ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಯಾನಂದ ಪಾಟೀಲ್ ಮುಂತಾದವರು ಇದ್ದರು. ಡಿಎಆರ್ ಕಾನ್ಸ್‌ಟೇಬಲ್ ಸುರೇಶ್ ಪಾಟೀಲ ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಪ್ರಥಮ ದರ್ಜೆ ಗುಮಸ್ತೆ ಮಲ್ಲಮ್ಮ ಅವರು ಕಾರ್ಯಕ್ರಮ ನಿರೂಪಿಸಿದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

45 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago