ಹೈಕೋರ್ಟ್ ಗೆ ಕೆಯುಡಬ್ಲ್ಯೂಜೆ ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿ ವಜಾ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ನಿಯಮಾವಳಿ ಪ್ರಕಾರ ನ್ಯಾಯಸಮ್ಮತವಾಗಿ ಚುನಾವಣೆ ನಡೆದಿದೆ ಎನ್ನುವುದನ್ನು ಎತ್ತಿ ಹಿಡಿದಿದೆ. ಚುನಾವಣಾ ಫಲಿತಾಂಶಕ್ಕೆ ನೀಡಿದ್ದ ತಡೆಯಾಜ್ಞೆಯು ತೆರವಾಗಿದೆ.

ತಕರಾರು: ಕೆಯುಡಬ್ಲ್ಯೂಜೆ ಚುನಾವಣೆ ಕ್ರಮಬದ್ದವಾಗಿ ನಡೆದಿಲ್ಕ. ಕರ್ನಾಟಕ ಟ್ರೇಡ್ ಯುನಿಯನ್ ಎಲೆಕ್ಷನ್ (ಮಾಡೆಲ್ ರೂಲ್ಸ್) 1953 ಪ್ರಕಾರ ಚುನಾವಣೆ ಮಾಡಿಲ್ಲ. ಚುನಾವಣಾಧಿಕಾರಿ ನೇಮಕ ಸಕ್ರಮವಾಗಿಲ್ಲ. ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಅಜೆಂಡಾ ಹಾಕಿಲ್ಲ ಎಂಬಿತ್ಯಾದಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಆಗಿರುವ ಕರ್ನಾಟಕ ಯುನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಹೆಸರು ಬಿಟ್ಟು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಎಂಬ ಹೆಸರಿನಲ್ಲಿ ಚುನಾವಣೆ ನಡೆಸಿರುವುದು ಸರಿಯಲ್ಲ ಎಂದು ತಕರಾರು ಸಲ್ಲಿಸಲಾಗಿತ್ತು.

ಚುನಾವಣಾ ತಕರಾರು ಎತ್ತಿದ್ದ ಅಮರನಾಥ್, ಬಂಗ್ಲೆ ಮಲ್ಲಿಕಾರ್ಜುನ ಮತ್ತಿತರರು, ಚುನಾವಣಾ ಕ್ರಮವನ್ನು ಆಕ್ಷೇಪಿಸಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಚುನಾವಣಾಧಿಕಾರಿಗಳು ಮತ್ತು ಕಾರ್ಮಿಕ ಇಲಾಖೆಯನ್ನು ಪ್ರತಿವಾದಿಯನ್ನಾಗಿಸಿ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದರು.

ವಿಚಾರಣೆ: ಚುನಾವಣೆಗೆ ತಡೆ ನೀಡಲು ನಿರಾಕರಿಸಿದ್ದ ಹೈಕೋರ್ಟ್ ಚುನಾವಣಾ ಫಲಿತಾಂಶ ಪ್ರಕಟ ಮಾಡದಂತೆ ಮಧ್ಯಂತರ ತೀರ್ಪು ನೀಡಿತ್ತು. ಹಾಗಾಗಿ ದಿನಾಂಕ 27.2.2022 ರಂದು ಚುನಾವಣೆ ನಡೆದರೂ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿರಲಿಲ್ಲ.

ಸುಧೀರ್ಘ ವಿಚಾರಣೆ‌ ನಡೆಸಿದ ಹೈಕೋರ್ಟ್ ಕೆಯುಡಬ್ಲ್ಯೂಜೆ ಚುನಾವಣಾ ಪ್ರಕ್ರಿಯೆಯು ಕ್ರಮಬದ್ದವಾಗಿ ನಡೆದಿರುವುದನ್ನು ಎತ್ತಿ ಹಿಡಿದಿದೆ. ಅರ್ಜಿದಾರರ ತಕರಾರುಗಳು ಊರ್ಜಿತವಲ್ಲ ಎಂದು ನಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಅವರಿದ್ದ ನ್ಯಾಯಪೀಠ ಹೇಳಿದೆ.

ಕಳೆದ ಒಂದೂವರೆ ತಿಂಗಳಿಂದ ಚುನಾವಣೆಗೆ ಇದ್ದ ಮಧ್ಯಂತರದ ತಡೆಯಾಜ್ಞೆ ತೆರವಾಗಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.

ಏಳು ಸಾವಿರ ಸದಸ್ಯರು: 31 ಜಿಲ್ಲಾ ಘಟಕ ಮತ್ತು ರಾಜ್ಯ ಘಟಕಕ್ಕೆ ಏಕಕಾಲದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಏಳು ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತದಾನದ ಹಕ್ಕು ಹೊಂದಿದ್ದರು.

ರಾಜ್ಯ ಘಟಕ: ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾಗಿ ಮತ್ತಿಕೆರೆ ಜಯರಾಂ, ನಿಂಗಪ್ಪ ಚಾವಡಿ, ಸೋಮಶೇಖರ ಕೆರಗೋಡು ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಮೂರು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

ಜಿಲ್ಲಾ ಘಟಕಗಳು: ಹದಿಮೂರು ಜಿಲ್ಲಾ ಘಟಕಗಳಿಗೆ ಅವಿರೋಧ ಆಯ್ಕೆ ಆಗಿದ್ದು ಇನ್ನುಳಿದ ಜಿಲ್ಲೆಗಳಿಗೆ ಚುನಾವಣೆ ನಡೆದಿತ್ತು.ಕೆಯುಡಬ್ಲ್ಯೂಜೆ ಪರವಾಗಿ ಹಿರಿಯ ಖ್ಯಾತ ವಕೀಲರಾದ ಎಸ್.ಬಿ.ಮುಕ್ಕಣ್ಣಪ್ಪ ವಾದಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago