ಕಲಬುರಗಿ: ಅಭಿವೃದ್ದಿ ವಿಚಾರದಲ್ಲಿ ತಾವು ರಾಜಕೀಯ ಮಾಡುವುದಿಲ್ಲ. ಕಳೆದ ಸಲ ತಾಂಡಾಗಳು ಮತ್ತು ಹಲವು ಗ್ರಾಮಗಳಲ್ಲಿ ನಿರೀಕ್ಷಿತ ಮತಗಳು ಬಂದಿಲ್ಲ. ಆದರೂ ಕೂಡಾ ಜನರ ಪ್ರತಿನಿಧಿಯಾಗಿ ತಾವು ಅಂತಹ ಗ್ರಾಮ ಹಾಗೂ ತಾಂಡಗಳಲ್ಲಿ ಅಭಿವೃದ್ದಿ ಕಾಮಗಾರಿ ನಿಲ್ಲಿಸಿಲ್ಲ, ನಿಲ್ಲಿಸುವುದೂ ಇಲ್ಲ ಎಂದು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ಅಲ್ಲೂರು ( ಬಿ ) ಗ್ರಾಮದಲ್ಲಿ ರೂ 26.89 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ 50 ಕೆ ಎಲ್ ಸಾಮರ್ಥ್ಯದ ನೀರು ಸಂಗ್ರಹ ಟ್ಯಾಂಕ್ (OHT) ಗೆ ಅಡಿಗಲ್ಲು ಹಾಗೂ ರೂ 24 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶಾಲಾ ಕೋಣೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಒತ್ತು, ಈ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ನಾಯಕರಿಗೆ ಸವಾಲ್ ಹಾಕಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…