ಕಲಬುರಗಿ: ಮಾನಸಿಕ, ಸಾಮಾಜಿಕ, ಲೈಂಗಿಕ, ಆಧ್ಯಾತ್ಮಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ವಿಷಯಗಳಿಗೆ ಶರಣರು ತಮ್ಮ ವಚನಗಳಲ್ಲಿ ಪರಿಹಾರ ಸೂಚಿಸಿದ್ದಾರೆ ಎಂದು ಖ್ಯಾತ ವಾಗ್ಮಿ ಡಾ. ನಾ ಸೋಮೇಶ್ವರ ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲಾ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತು ಹಾಗೂ ಷಡಕ್ಷರಿಸ್ವಾಮಿ ಡಿಗ್ಗಾಂವಕರ ಟ್ರಸ್ಟ್ ಸಹಯೋಗದಲ್ಲಿ ಲಿಂ. ಪೂಜ್ಯ ಬಸವರಾಜಪ್ಪ ಅಪ್ಪ ಮತ್ತು ಲಿಂ. ನಳಿನಿತಾಯಿ ಬಸವರಾಜಪ್ಪ ಅಪ್ಪ ಅವರ ಪ್ರಥಮ ಪುಣ್ಯಸ್ಮರಣಾರ್ಥ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಆನ್ಲೈನ್ ಉಪನ್ಯಾಸ ಸರಣಿಯಲ್ಲಿ ವಚನಗಳಲ್ಲಿ ಆರೋಗ್ಯ ದರ್ಶನ ಎಂಬ ವಿಷಯ ಕುರಿತು ಮಾತನಾಡಿದರು.
ಜಗತ್ತಿನಲ್ಲಿ ವಚನ ಸಾಹಿತ್ಯ ಒಂದು ಅನನ್ಯ ಸಾಹಿತ್ಯ ಪ್ರಕಾರವಾಗಿದೆ ಆರೋಗ್ಯದ ಕುರಿತಂತೆ ಅಕ್ಕಮಹಾದೇವಿ, ಅಲ್ಲಮಪ್ರಭು, ಬಸವಣ್ಣನವರು ತಮ್ಮ ವಚನಗಳಲ್ಲಿ ಅತ್ಯಂತ ಸರಳವಾಗಿ ಎಲ್ಲರಿಗೂ ತಿಳಿಯುವಂತೆ ಮಾಡಿದ್ದಾರೆ.
ಕಾಡಸಿದ್ದೇಶ್ವರ ವಚನದಲ್ಲಿ ವೈದ್ಯಕೀಯ ಲೋಕವೇ ಬೆರಗಾಗುವಂತೆ ಗರ್ಭದಿಂದ ಶಿಶುವಾಗಿ ಜನಿಸುವ ಪರಿಯನ್ನು ವಿವರಿಸಲಾಗಿದೆ. ಹಾಲಸಂಗಯ್ಯ, ಚೆನ್ನಬಸವಣ್ಣ ಸೇರಿದಂತೆ ಅನೇಕ ವಚನಕಾರರು ಆರೋಗ್ಯಕ್ಕೆ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
ಡಾ, ನೀಲಾಂಬಿಕಾ ಪೊಲೀಸ್ ಪಾಟೀಲ ಮಾತನಾಡಿ, ಬಸವರಾಜಪ್ಪ ಅಪ್ಪ ಸರಳತೆಯನ್ನು ಮೈಗೂಡಿಸಿಕೊಂಡಿದ್ದರು. ಶರಣ ಧರ್ಮವನ್ನು ಪರಿಪಾಲಿಸುತ್ತ ಕೃಷಿ ಕಾಯಕವನ್ನು ಪ್ರೀತಿಸುತ್ತಿದ್ದರು. ಮಾತು ಕಡಿಮೆ ಕೆಲಸ ಹೆಚ್ಚು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟವರಾಗಿದ್ದರು ಎಂದು ನುಡಿನಮನ ಸಲ್ಲಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…