ಪರಿಷತ್ತಿನ ಕಾರ್ಯ ಇತಿಹಾಸದಲ್ಲಿ ಮಾನವೀಯತೆ ಮೆರೆಯುವ ಕೆಲಸ: ಹರ್ಷಾನಂದ ಗುತ್ತೇದಾರ

ಕಲಬುರಗಿ: ಬೇಸಿಗೆ ಬಂದಾಕ್ಷಣ ಜಲಕ್ಷಾಮ ಪ್ರತಿ ಊರಿನಲ್ಲಿ ಸಹಜ ಸಾಮಾನ್ಯವಾಗಿದೆ. ಮನುಷ್ಯರಿಗೆ ಕುಡಿಯುವ ನೀರು ದೊರಕುತ್ತಿಲ್ಲ. ಇನ್ನು ಪ್ರಾಣಿ ಪಕ್ಷಿಗಳ ಪರಿಸ್ಥಿತಿ ಹೇಳತೀರದು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕರಿಗೆ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಾಗೂ ಪಕ್ಷಿಗಳಿಗೆ ನೀರು, ಆಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಅರವಟ್ಟಿಗೆಗಳನ್ನು ಕಟ್ಟಿ ನೀರಿನ ವ್ಯವಸ್ಥೆ ಮಾಡುವ ಮೂಲಕ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಮಾನವೀಯತೆ ಮೆರೆಯುವ ಕಾರ್ಯ ಮಾಡಿದಂತಾಗಿದೆ.

ಸೇವೆಗೆ ಚಾಲನೆ ನೀಡಿದ ಜಿಪಂ ನ ಮಾಜಿ ಉಪಾಧ್ಯಕ್ಷ ಹರ್ಷಾನಂದ ಸುಭಾಷ ಗುತ್ತೇದಾರ ಮಾತನಾಡಿ, ಜಲ ಮೂಲಗಳ ರಕ್ಷಣೆ, ನೀರಿನ ಮಿತ ಬಳಕೆ, ನೀರು ಸಂಗ್ರಹ ಹಾಗೂ ಹಸರೀಕರಣದ ಬಗ್ಗೆ ನಾವೆಲ್ಲ ಜಾಗೃತರಾಗಬೇಕಾಗಿದೆ. ಜತೆಗೆ ಯುದ್ದೋಪಾದಿ ನೀರಿನ ಸಂರಕ್ಷಣೆ ಆಗಬೇಕಾಗಿದೆ. ಅವಶ್ಯಕತೆಗನುಗುಣವಾಗಿ ನೀರನ್ನು ಬಳಸುವ ಸಂಸ್ಕೃತಿ ರೂಢಿಸಿಕೊಲ್ಳಬೇಕಾಗಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನೀರು ಬಹಳ ಅತ್ಯಮೂಲ್ಯವಾಗಿದ್ದು, ಯಾವುದೇ ಕಾರಣಕ್ಕೂ ಅನಗತ್ಯವಾಗಿ ವ್ಯರ್ಥಗೊಳಿಸದೇ ಜೀವ ಜಲ ಉಳಿಸಿಕೊಂಡಾಗ ಸಕಲ ಜೀವಿಗಳು ಉಳಿಯಲು ಸಾಧ್ಯ. ಬೇಸಿಗೆ ಕಾಲದಲ್ಲಿ ಅರವಟ್ಟಿಗೆಗಳನ್ನು ಪರಿಷತ್ತಿನ ವತಿಯಿಂದ ಇದೇ ಮೊದಲ ಬಾರಿ ಆರಂಭಿಸಿದ್ದರಿಂದ ನಗರದ ಅನೇಕರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಚಿಂಚೋಳಿ ತಹಾಸೀಲ್ದಾರ್ ಅಂಜುಮ್ ತಬಸ್ಸುಮ್, ಉದ್ಯಮಿಗಳಾದ ನೀಲಕಂಠರಾವ ಮೂಲಗೆ, ಸುದರ್ಶನ್ ಜತ್ತನ್ ಮಾತನಾಡಿದರು. ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಎಸ್.ಅಂಡಗಿ, ಯಶವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ಶಕುಂತಲಾ ಪಾಟೀಲ ಜಾವಳಿ, ಕಲ್ಯಾಣಕುಮಾರ ಶೀಲವಂತ, ಧರ್ಮಣ್ಣ ಹೆಚ್.ಧನ್ನಿ, ರಾಜೇಂದ್ರ ಮಾಡಬೂಳ, ವಿನೋದ ಜೇನವೇರಿ, ರವೀಂದ್ರಕುಮಾರ ಭಂಟನಳ್ಳಿ, ಪ್ರಮುಖರಾದ ಶಿವಲೀಲಾ ತೆಗನೂರ, ಪ್ರಭುಲಿಂಗ ಮೂಲಗೆ, ಶಿವಶರಣಪ್ಪ ಪರಪ್ಪಗೋಳ, ವೆಂಕಟೇಶ , ವಿಶ್ವನಾಥ ಪಾಟೀಲ ಗೌನಳ್ಳಿ, ರಾಜಶೇಖರ ಪಾಟೀಲ ತೇಗಲತಿಪ್ಪಿ, ಶಿವರುದ್ರ ಗುಡ್ಡಾ, ಮಲ್ಲಿಕಾರ್ಜುನ ಇಬ್ರಾಹಿಂಪುರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬಿಸಿಲಿನಿಂದ ಬಳಲಿದವರಿಗೆ ತಣ್ಣನೆಯ ಮಡಿಕೆಯಲ್ಲಿ ತಣ್ಣೀರು ಕೊಡುವುದರೊಂದಿಗೆ ಅವರ ದಾಹವನ್ನು ತೀರಿಸುವ ಸಾಮಾಜಿಕ ಕಾರ್ಯಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೈಜೋಡಿಸಿರುವುದು ಉತ್ತಮ ಬೆಳವಣಿಗೆ. ಜಿಲ್ಲಾ ಕಸಾಪ ಕ್ಕೆ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಅವರು ಅಧ್ಯಕ್ಷರಾದ ನಂತರ ನಿತ್ಯ ನೂತನ ಕಾರ್ಯಕ್ರಮಗಳು ಹಮ್ಮಿಕೊಂಡು ಬರುತ್ತಿರುವುದು ವಿಶೇಷ ಮತ್ತು ವಿಶಿಷ್ಟವಾದುದು. – ಹರ್ಷಾನಂದ ಎಸ್.ಗುತ್ತೇದಾರ, ಜಿಪಂ ಮಾಜಿ ಉಪಾಧ್ಯಕ್ಷ.
emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

31 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago