ಸುರಪುರ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಸುರಪುರ ಪೊಲೀಸ್‌ಗೆ ದೂರು ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಕಳೆದ ೬ನೇ ತಾರೀಖು ಬೆಂಗಳೂರಿನ ಜೆ.ಪಿ ನಗರದಲ್ಲಿ ಚಂದ್ರು ಎನ್ನುವವನು ಗಲಾಟೆಯಲ್ಲಿ ಸಾವಿಗೀಡಾಗಿದ್ದಾನೆ.ಆದರೆ ಅಲ್ಲಿ ಏನು ನಡೆದಿದೆ ಎನ್ನುವುದನ್ನು ತಿಳಿದುಕೊಳ್ಳದ ಗೃಹ ಸಚಿವರು ಚಂದ್ರು ಉರ್ದು ಮಾತನಾಡಲಿಲ್ಲ ಎನ್ನುವ ಕಾರಣಕ್ಕೆ ಹತ್ಯೆ ಮಾಡಿದ್ಧಾರೆ ಎಂದು ಸುಳ್ಳು ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಸುರಪುರ ಎಪಿಎಮ್‌ಸಿ ಕಚೇರಿ ಮುಂದೆ ರೈತ ಸಂಘ ಪ್ರತಿಭಟನೆ
ಅಲ್ಲದೆ ಇದಕ್ಕೆ ಬೆಂಬಲಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಚಂದ್ರು ಹತ್ಯೆಯ ಕುರಿತು ಕನ್ನಡ ಮಾತನಾಡಿದ್ದಕ್ಕೆ ಒಬ್ಬ ದಲಿತ ಸಮುದಾಯದ ಯುವಕನನ್ನು ಕೊಲೆ ಮಾಡಲಾಗಿದೆ.ಇದಕ್ಕೆ ಕನ್ನಡ ಹೋರಾಟಗಾರರು ಮತ್ತು ಬುದ್ಧಿ ಜೀವಿಗಳು ಏನು ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ.ಆದ್ದರಿಂದ ಇವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಂತರ ಠಾಣಾ ಅಧಿಕಾರಿಗೆ ಬರೆದ ಮನವಿಯನ್ನು ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ದೊರೆ ಆಲ್ದಾಳ,ಭಂಡಾರೆಪ್ಪ ನಾಟೇಕಾರ್,ವೆಂಕಟೇಶ ಬೇಟೆಗಾರ,ಮಾರ್ಥಂಡಪ್ಪ ದೇವರಗೋನಾಲ,ಹಣಮಂತ್ರಾಯ ಮಕಾಶಿ ಸೇರಿದಂತೆ ಅನೇಕರಿದ್ದರು.
ಇದನ್ನೂ ಓದಿ: ಅಂಬೇಡ್ಕರ್ ಸೇನೆ ಕೆಕೆ ಪ್ರಧಾನ ಕಾರ್ಯದರ್ಶಿ ರಾಜು ಕಟ್ಟಿಮನಿ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…