ಬಿಸಿ ಬಿಸಿ ಸುದ್ದಿ

ಈಶ್ವರಪ್ಪ ವಜಾಗೊಳಿಸಿ, ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರಗಿ; ಗುತ್ತಿಗೆ ದೂರ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ಡೆತ್ ಮೆಸೆಜ್ ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿರುವುದರಿಂದ ಅವರನ್ನ ವಜಾ ಮಾಡಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರಿಂದ ನೇಮಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ಅಕ್ರಮ: ನಾಳೆ ಪ್ರತಿಭಟನೆ

ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ನಾತನಾಡುತ್ತಿದ್ದ ಅವರು ಗುತ್ತಿಗೆದಾರರು ಈ ಮುಂಚೆ ಸರ್ಕಾರ 40 % ಕಮಿಷನ್ ಬೇಡಿಕೆ ಇಟ್ಟಿದೆ ಈ‌ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.ಆದರೂ ಕೂಡಾ‌ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ ಈಗ ಒಂದು ಜೀವ ಹೋಗಿದೆ ಇದಕ್ಕಿಂದ ಪ್ರೂಫ್ ಬೇಕಾ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

” 40 % ಪರ್ಸೆಂಟ್ ಕಮಿಷನ್ ಬಗ್ಗೆ ಈ ಹಿಂದೆ ಅನೇಕ ಬಾರಿ ಸಂತೋಷ ಹೇಳಿದ್ದರು. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರಲಿಲ್ಲ
ನಾ ಖಾವುಂಗ.. ಖಾನೇಕೋಭಿ ನಹಿ ದೇವುಂಗ ಎಂದು ಪ್ರಧಾನಿ ಹೇಳಿದ್ದರು. ಆದರೆ ಸರ್ಕಾರದಲ್ಲಿ ಎಲ್ಲವು ನಡೆಯುತ್ತಿದೆ. ಈ ವಿಷಯವನ್ನ ಬೆಳಗಾವಿ-ಬೆಂಗಳೂರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇವು. ಆದರೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ದುರ್ದೈವವೆಂದರೆ ಚರ್ಚೆ ಮಾಡಲು ನಿಮ್ಮಹತ್ರ ಪ್ರೂಫ್ ಇದೆಯಾ ಅಂತಾ ಕೇಳಿದ್ದರು” ಎಂದು ನೆನಪಿಸಿಕೊ‌ಂಡರು.

ಇದನ್ನೂ ಓದಿ; ಕಲಬುರಗಿ ಪೇಟೆ ಧಾರಣೆ

ಸಿಎಂ ಬಸವರಾಜ್ ಬೊಮ್ಮಾಯಿ‌ ಆರ್‌ಎಸ್‌ಎಸ್ ಕೈಗೊಂಬೆಯಾಗಿದ್ದು ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ಕ್ರಮ ತೆಗೆದುಕೊಳ್ಳದ ಸಿಎಂ, ಓರ್ವ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು‌ ದೂರಿದರು.

” ಸಂತೋಷ ಪಾಟೀಲ್ ಡೆತ್ ಮೆಸೆಜ್ ನಲ್ಲಿ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟ ವಾಗಿ ಉಲ್ಲೇಖಿಸಿರುವುದರಿಂದ ಆತ್ಮಹತ್ಯೆಗೆ ಪ್ರೇರಣೆ ಎಂದು ಕೇಸು ದಾಖಲಿಸಬೇಕು ಜೊತೆಗೆ ನ್ಯಾಯಾಧೀಶರಿಂದ ಸಮಗ್ರ ತನಿಖೆ ವಾಗುವರೆಗೆ ಈಶ್ವರಪ್ಪನವರನ್ನ ವಜಾಗೊಳಿಸಬೇಕು ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ದೇಶದಲ್ಲಿ ಹಿಂದು- ಮುಸ್ಲಿಂ ಸಮುದಾಯದವರು ಒಂದಾಗಿ ಸಹಬಾಳ್ವೆ ನಡೆಸಿ: ಸಾಧ್ವಿ ನಿರಂಜನ ಜ್ಯೋತಿ

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

53 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

20 hours ago