ಸುರಪುರ: ರಾಮ್ ಸೇನಾ ಸಂಘಟನೆಯ ನೇತೃತ್ವದಲ್ಲಿ ಇದೇ ೧೫ನೇ ತಾರೀಖು ನಗರದಲ್ಲಿ ಶೋಭಾಯಾತ್ರೆ ಹಮ್ಮಿಕೊಂಡಿದ್ದು ಎಲ್ಲರು ಭಾಗವಹಿಸುವಂತೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶರಣು ನಾಯಕ ಡೊಣ್ಣಿಗೇರಾ ಮನವಿ ಮಾಡಿಕೊಂಡರು.
ನಗರದ ರಾಮ್ ಸೇನಾ ಕಚೇರಿಯಲ್ಲಿ ಈ ಕುರಿತು ಮಾತನಾಡಿ,ರಾಮ್ ಸೇನಾ ಸಂಘಟನೆ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀರಾಮ ನವಮಿ ಅಂಗವಾಗಿ ಇದೇ ೧೫ನೇ ತಾರೀಖು ನಗರದ ಪ್ರಮುಖ ಬೀದಿಗಳಲ್ಲಿ ಶ್ರೀರಾಮರ ಹಾಗೂ ಶ್ರೀರಾಮಾಂಜನೆಯರ ಭಾವಚಿತ್ರಗಳ ಮೆರವಣಿಗೆ ಜೊತೆಗೆ ಬೃಹತ್ ಶೋಭಾಯಾತ್ರೆ ಜರುಗಲಿದೆ.ಆದ್ದರಿಂದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶ್ರೀರಾಮರ ಭಕ್ತರು ಹಾಗೂ ಹಿಂದು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸೇನೆಯ ರಾಜ್ಯ ಪ್ರಮುಖ ಬಸವ ಶಾಸ್ತ್ರಿ ಕೋನ್ಹಾಳ, ತಾಲೂಕು ಅಧ್ಯಕ್ಷ ಶರಣು ನಾಯಕ ದೀವಳಗುಡ್ಡ,ತಾ.ಪ್ರಧಾನ ಕಾರ್ಯದರ್ಶಿ ಹಂಪಯ್ಯ ಬೋನ್ಹಾಳ,ಜಿಲ್ಲಾ ಉಪಾಧ್ಯಕ್ಷ ಲೊಕೇಶ ಡೊಣ್ಣಿಗೇರಾ,ಈಶ್ವರಯ್ಯ ಸ್ವಾಮಿ ಜೈನಾಪುರ,ಶಿವು ಕೊನ್ಹಾಳ,ಮುತ್ತು ಸ್ವಾಮಿ,ವಿರೇಶ ರೆಡ್ಡಿ,ನಾಗರಾಜ ರೆಡ್ಡಿ,ಶಶಿಕುಮಾರ ಕೊನ್ಹಾಳ,ನಾಗು ತಿಂಥಣಿ,ಚಿನ್ನು ವೆಂಕಟಾಪುರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…