ಬಿಸಿ ಬಿಸಿ ಸುದ್ದಿ

ಬೆಲೆ ಏರಿಕೆಯನ್ನು ಖಂಡಿಸಿ ಎಸ್‍ಯುಸಿಐ (ಕಮ್ಯುನಿಸ್ಟ್) ಪ್ರತಿಭಟನೆ

ಶಹಾಬಾದ: ನಗರದ ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷವು ಕೇಂದ್ರ ಬಿಜೆಪಿ ಸರ್ಕಾರದ ಅನಿಯಂತ್ರಿ ಬೆಲೆ ಏರಿಕೆಯನ್ನು ಖಂಡಿಸಿ ಸೋಮವಾರ ಸಂಜೆ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಎಸ್.ಯು.ಸಿ.ಐ(ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ್ ಮಾನೆ ಮಾತನಾಡಿ, ಪೆಟ್ರೋಲ್,ಡಿಸೇಲ್, ಅಡುಗೆ ಎಣ್ಣೆ ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ.ಜನರು ತತ್ತರಿಸಿ ಹೋಗಿದ್ದಾರೆ. ಆದರೂ ಬಿಜೆಪಿ ಸರಕಾರ ಯಾವುದೇ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ: ಜನವಿರೋಧಿ, ಭ್ರಷ್ಟ ಸರಕಾರ, ನೀತಿಗೆಟ್ಟ ಸರ್ಕಾರವೇ ಬಿಜೆಪಿ ಸರ್ಕಾರ: ಪ್ರಿಯಾಂಕ್ ಖರ್ಗೆ

ಪೆಟ್ರೋಲಿಯಂ ವಸ್ತುಗಳ ಬೆಲೆಯೇರಿಕೆ ಬಗ್ಗೆ ಟೀಕಿಸಿದಾಗ, ಅದು ಜಾಗತಿಕ ದರಗಳ ಕಡೆಗೆ, ತೈಲ ಕಂಪನಿಗಳ ಕಡೆಗೆ ಕೈ ತೋರಿಸುತಿತ್ತು. ಆದರೆ ಚುನಾವಣೆಗಳ ಸಂದರ್ಭದಲ್ಲಿ ಬೆಲೆ ಏರಿಕೆ ಆಗದೇ ಇರುವುದನ್ನು ದೇಶದ ಜನತೆ ನೋಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ನಯವಂಚನೆಯು ಜನರಿಗೆ ಅರ್ಥವಾಗುತ್ತಿದೆ. ರಷ್ಯಾ – ಉಕ್ರೇನ್ ಯುದ್ಧದ ನೆಪ ನೀಡಿ ಈ ಬೆಲೆಯೇರಿಕೆಯನ್ನು ಮಾಡಲಾಗಿದೆ. ಆದರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್ ಗೆ 135 ಡಾಲರ್ ನಿಂದ 100 ಡಾಲರ್ ಗೆ ಇಳಿದಿದೆ. ಡೀಸೆಲ್ ಸಗಟು ದರವನ್ನು ಲೀಟರ್ ಗೆ ರೂ.25 ಏರಿಕೆ ಮಾಡಿರುವುದರಿಂದ ಸಾರಿಗೆ, ಸಾಗಾಟದ ವೆಚ್ಚ ಮತ್ತಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಮಿನಿ ಇಡ್ಲಿ ಸವೆದ ಶಾಸಕ ಪ್ರಿಯಾಂಕ ಖರ್ಗೆ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಸ್ಥಳಿಯ ಸಮಿತಿಯ ಸದಸ್ಯರಾದ ಕಾಮ್ರೇಡ್ ರಾಘವೇಂದ್ರ ಎಮ್ ಜಿ ರವರು ಮಾತನಾಡುತ್ತಾ, ಬಿಜೆಪಿ ಪಕ್ಷವು ಅಚ್ಛೆ ದಿನಗಳನ್ನು ತರುತ್ತೇನೆಂದು ಬಣ್ಣಬಣ್ಣದ ಮಾತುಗಳನ್ನಾಡುತ್ತಾ ಅಧಿಕಾರಕ್ಕೆ ಏರಿದ ದಿನದಿಂದಲೂ ನಿರಂತರವಾಗಿ ಜನವಿರೋಧಿ ನೀತಿಗಳನ್ನು ಒಂದಾದ ಮೇಲೋಂದರಂತೆ ತರುತ್ತಿದ್ದಾರೆ. ಅಂಬಾನಿ-ಅದಾನಿಯಂತಹ ಬಂಡವಾಳಶಾಹಿಗಳ ಸೇವೆಯಲ್ಲಿ ಪ್ರಧಾನಿಯಾದ ನರೇಂದ್ರ ಮೋದಿಯವರು ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನರನ್ನು ನೈಜ ಸಮಸ್ಯೆಗಳಿಂದ ಮುಚ್ಚಿಡಲು ಧರ್ಮಾಂಧತೆ, ಜಾತೀಯತೆ ಹಾಗೂ ಪ್ರಾಂತೀಯತೆಯಂತಹ ಕ್ಷುಲ್ಲಕ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಈ ದೇಶದ ದುಡಿಯುವ ಜನತೆಯು ಒಡೆದಾಳುವ ನೀತಿಯ ಮೋಸಕ್ಕೆ ಒಳಗಾಗದೇ, ಇವರ ಕುತಂತ್ರಗಳನ್ನು ಸೋಲಿಸಲು ಸಂಘಟಿತ ಹೋರಾಟಗಳನ್ನು ಕಟ್ಟಲು ಜನತೆಯು ಮುಂದಾಗಬೇಕೆಂದು ಕರೆ ನೀಡಿದರು.

ಎಸ್‍ಯುಸಿಐ(ಸಿ) ಜಿಲ್ಲಾ ಸಮಿತಿ ಸದಸ್ಯರಾದ ಕಾಮ್ರೇಡ್ ರಾಮಣ್ಣ.ಎಸ್.ಇಬ್ರಾಹಿಮ್‍ಪೂರ, ಕಾಮ್ರೇಡ್ ಜಗನ್ನಾಥ.ಎಸ್.ಹೆಚ್ ಮಾತನಾಡಿದರು.

ಇದನ್ನೂ ಓದಿ: ಕಲಬುರಗಿ ವಿಮಾನ ನಿಲ್ದಾಣಕ್ಕಉತ್ತಮ ಗುಣಮಟ್ಟದ ಒಳ್ಳೆಯ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ

ಪ್ರತಿಭಟನೆಯಲ್ಲಿ ಪಕ್ಷದ ಸದಸ್ಯರಾದ ರಾಜೇಂದ್ರ ಅತನೂರ, ತುಳಜರಾಮ.ಎನ್. ಕೆ , ನೀಲಕಂಠ.ಎಮ್.ಹುಲಿ, ರಮೇಶ್ ದೇವಕರ್, ಮಹಾದೇವಿ ಮಾನೆ, ಅಂಬಿಕಾ ಆರ್ ಜಿ, ಮಾಹದೇವಿ ಅತನೂರು, ಮಹಾದೇವ ಸ್ವಾಮಿ, ರಘು ಪವಾರ್, ಕಿರಣ್ ಜಿ ಮಾನೆ, ಸುರೇಶ್, ಅಜಯ್, ಸ್ಪೂರ್ತಿ, ಆನಂದ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago