ಧರ್ಮದ ದಂಗಲ್ ಸರಿಯಲ್ಲ
ರಾಜ್ಯದಲ್ಲಿ ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರುವುದು, ಧರ್ಮದ ಹೆಸರಿನಲ್ಲಿ ದಂಗಲ್ ಮಾಡಿಸುತ್ತಿರುವುದು ಬಹಳ ಕೆಟ್ಟ ವಿಚಾರ. ಅತ್ಯಂತ ಸಣ್ಣ ವಿಚಾರಕ್ಕೆ ಜಗಳ ನಡೆಸುತ್ತಿರುವುದು, ಪ್ರಚೋದಿಸುತ್ತಿರುವುದು ದುರ್ದೈವ ಸಂಗತಿಯಾಗಿದೆ ಎಂದು ನೋವಿನಿಂದ ನುಡಿದರು.
“ನ್ಯಾಷನಲ್ ಹೆರಾಲ್ಡ್” ಇ.ಡಿ ವಿಚಾರಣೆ ಕುರಿತು ನಾನು ಮಾತನಾಡುವುದಿಲ್ಲ. ಅದು ನಮ್ಮ ಪಕ್ಷದ ವಿಚಾರ. ಹೀಗಾಗಿ ಇಲ್ಲಿ ಮಾತನಾಡುವುದಿಲ್ಲ. ರಾಜ್ಯದಲ್ಲಿ ಧರ್ಮದ ಹೆಸರಿನಲ್ಲಿ ಗಲಾಟೆ ಎಬ್ಬಿಸಿದರೆ ರಾಜ್ಯದಲ್ಲಿರುವ ಐಟಿ ಬಿಟಿಯಂತಹ ದೊಡ್ಡ ಕೈಗಾರಿಕೆಗಳು ಬೇರೆ ಕಡೆಗೆ ಹೋಗಬಹುದು. -ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧ ಪಕ್ಷದ ನಾಯಕ
ಕಲಬುರಗಿ: ಗುತ್ತಿಗೆದಾರರು ರಾಜ್ಯ ಸರ್ಕಾರದಿಂದ ಪರ್ಸೆಂಟೇಜ್ ಪಡೆಯಲಾಗುತ್ತಿದೆ ಎಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಳ್ಳದ ಪ್ರಧಾನಿ ಈಗಲಾದರೂ ಕಣ್ತೆರೆದು ನೋಡಲಿ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.
ಇದನ್ನೂ ಓದಿ: ಕಲಬುರಗಿಯಲ್ಲಿ ಏಪ್ರಿಲ್ 18 ರಿಂದ 30ವರೆಗೆ ಆರೋಗ್ಯ ಮೇಳ: ಡಾ. ಉಮೇಶ ಜಿ ಜಾಧವ
ಮಂಗಳವಾರ ದೆಹಲಿಯಿಂದ ನಗರಕ್ಕೆ ಆಗಮಿಸಿದ ಅವರು ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿ, ಅಭಿವೃದ್ಧಿಗೆ ಹೆಸರಾದ ಕರ್ನಾಟಕ ರಾಜ್ಯದಲ್ಲಿ ಪರ್ಸೆಂಟೆಜ ರಾಜಕಾರಣ ನಡೆಯುತ್ತಿರುವುದು ದುರಂತ. ಹೀಗಿದ್ದರೂ, ನಾನು ಮಾಡಿದ್ದೆ ಸರಿ ಅನ್ನುವ ಭ್ರಮೆಯಲ್ಲಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂಬುದು ಒಮ್ಮೆ ಕಣ್ತೆರೆದು ನೋಡಲಿ. ಏನು ಮಾಡಿದರೂ ಜನರು ಸಹಿಸಿಕೊಳ್ಳುತ್ತಾರೆ ಎಂಬ ಗುಂಗಿನಲ್ಲಿ ಅವರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಜನವಿರೋಧಿ, ಭ್ರಷ್ಟ ಸರಕಾರ, ನೀತಿಗೆಟ್ಟ ಸರ್ಕಾರವೇ ಬಿಜೆಪಿ ಸರ್ಕಾರ: ಪ್ರಿಯಾಂಕ್ ಖರ್ಗೆ
ಬಿಜೆಪಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ. ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದರೂ ಕ್ರಮ ಕೈಗೊಳ್ಳಲಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಬಂದಾಗ, ಹೀಗಾದರೆ ಸರ್ಕಾರಕ್ಕೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಇದಕ್ಕೆ ಕಡಿವಾಣ ಹಾಕಿ ಎಂದು ಸ್ವತಃ ನಾನೇ ಹೇಳಿದ್ದೆ ಎಂದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ನನ್ನ ಬಳಿಯಲ್ಲಿ ಇಲ್ಲ. ಆತ್ಮಹತ್ಯೆ ಪ್ರಕರಣ ಕುರಿತಂತೆ ಸರ್ಕಾರ ತPಣ ಕ್ರಮ ತೆಗೆದುಕೊಳ್ಳಬೇಕು, ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಈಶ್ವರಪ್ಪ ವಜಾಗೊಳಿಸಿ, ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಪ್ರಿಯಾಂಕ್ ಖರ್ಗೆ ಆಗ್ರಹ
ಸುಳ್ಳು ಹೇಳಿಯೇ ನೀವು ಅಧಿಕಾರಕ್ಕೆ ಬಂದಿದ್ದು, ಈಗ ನೀವು ಏನು ಮಾಡುತ್ತಿದ್ದೀರಿ? ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.