ಬಾಗಲಕೋಟ: ‘ಭಾರತ ದೇಶದಲ್ಲಿ ದುಡಿಯುವ ಜನ ವರ್ಗಗಳಿಗೆ, ಮಹಿಳೆಯರಿಗೆ ರಕ್ಷಾಕವಚವಾದ ಪ್ರಜಾಪ್ರಭುತ್ವದ ಆಧಾರಸ್ತಂಭ ಸಂವಿಧಾನವೇ ಇಂದು ಅಪಾಯದಲ್ಲಿದೆ’ ಎಂದು ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಸನತ್ ಕುಮಾರ ಬೆಳಗಲಿ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿರುವ ಕೆಬಿಜಿಎನ್‍ಎಲ್ ಸಮುದಾಯ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮೀತಿ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ‘ಮೂಲನಿವಾಸಿಗಳೇ ನೀವೆಷ್ಟು ಬಲ್ಲಿರಿ ನಿಮ್ಮ ಇತಿಹಾಸ?’ ಎಂಬ ವಿಷಯದ ಕುರಿತು ಮಾತನಾಡಿದ ಅವರು, ‘ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಆತಂಕವಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಜೇವರ್ಗಿ ಶಾಂತಿಪ್ರಿಯ ಸರ್ವಜನಾಂಗದ ನೆಲೆ ಬಿಡು: ಡಾ. ಅಜಯಸಿಂಗ್
‘ಮುಸ್ಲಿಮ್ ಸಮುದಾಯದವರನ್ನು ಗುರಿಯನ್ನಾಗಿಕೊಂಡು ಹಿಜಾಬ್, ಹಲಾಲ್, ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧದ ಮೂಲಕ ಅವರ ಮೇಲಿನ ದಾಳಿ, ಮುಂದಿನ ದಿನಗಳಲ್ಲಿ ದಲಿತ ಮತ್ತು ಆದಿವಾಸಿಗಳ ಮೇಲೆ ನಡೆಯುವ ಸಾಧ್ಯತೆಗಳಿವೆ. ದಲಿತ ಸಮುದಾಯಗಳು ಈಗಲೇ ಎಚ್ಚೆತ್ತುಕೊಳ್ಳಬೇಕು. ಮುಂದಿನ ದಿನಗಳು ಭಯಾನಕವಾಗಲಿವೆ ಎಂಬುದರ ಸಂಕೇತಗಳಿವು’ ಎಂದು ಸನತ ಕುಮಾರ್ ಬೆಳಗಲಿ ಎಚ್ಚರಿಸಿದರು.
‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿವೆ. ಈ ಬಗ್ಗೆ ಜನಸಾಮಾನ್ಯರ ಪ್ರತಿಭಟನೆಯನ್ನು ಹತ್ತಿಕ್ಕುವ ದೃಷ್ಟಿಯಿಂದ ಕ್ಷುಲ್ಲಕ ಭಾವನಾತ್ಮಕ ವಿಚಾರಗಳನ್ನು ಮುಂದಿಡಲಾಗುತ್ತಿದೆ. ಎಲ್ಲಿಂದಲೋ ಬಂದವರು ದೇಶದ ಮೂಲನಿವಾಸಿಗಳ ಮೇಲೆ ಸವಾರಿ ಮಾಡಲು ಹಿಂದುತ್ವ, ರಾಷ್ಟ್ರೀಯತೆ ವಿಚಾರಗಳನ್ನು ಮುಂಚೂಣಿಗೆ ತರಲಾಗುತ್ತಿದೆ’ ಎಂದು ಅವರು ಟೀಕಿಸಿದರು.
ಉರ್ದು ಪತ್ರಿಕೆಗಳಿಗೆ ಇನ್ನೂರು ವರ್ಷ ಪುರೈಕೆ: ನಯಾ ಸವೇರಾದಿಂದ ಪತ್ರಕರ್ತರಿಗೆ ಸನ್ಮಾನ
‘ಸಂವಿಧಾನ ಕಲ್ಪಿಸಿರುವ ಸ್ವಾತಂತ್ರ್ಯ, ಸೌಹಾರ್ದತೆ, ಸಹಬಾಳ್ವೆ ನಾಶಕ್ಕೆ ಅಧಿಕಾರಸ್ಥರು ಹುನ್ನಾರ ನಡೆಸಿದ್ದಾರೆ. ಶೋಷಿತ ಸಮುದಾಯದ ಯುವಕರು ಕೋಮುವಾದಿ ವಿಚಾರಧಾರೆಗಳಿಗೆ ಬಲಿಯಾಗದಂತೆ ತಡೆಯಬೇಕು. ಆ ಜವಾಬ್ದಾರಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮೇಲಿದೆ. ಆ ಮೂಲಕ ಸಮಾನತೆ ಪರಿಕಲ್ಪನೆ ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಬದ್ಧರಾಗಬೇಕಿದೆ’ ಎಂದು ಸನತ್ ಕುಮಾರ್ ಬೆಳಗಲಿ ಕರೆ ನೀಡಿದರು.
ವೇದಿಕೆಯಲ್ಲಿ ದಸಂಸ ಸಂಚಾಲಕ ಲಕ್ಷ್ಮಿ ನಾರಾಯಣ ನಾಗವಾರ, ಪ್ರೊ.ಭೂತನಾಳ, ಅನಿಲ್ ಹೊಸಮನಿ, ಅಪ್ಪಗೆರೆ ಸೋಮಶೇಖರ್, ಜಿಲ್ಲಾ ಸಂಚಾಲಕರಾದ ಜೀವನಹಳ್ಳಿ ವೆಂಕಟೇಶ್, ರಾಜಶೇಖರ್ ಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…