ಗುತ್ತಿಗೆದಾರರ ಕಮಿಷನ್ ವ್ಯವಹಾರ: ನ್ಯಾಯಾಂಗ ತನಿಖೆಗೆ ಕೆ ನೀಲಾ ಆಗ್ರಹ

0
15

ಕಲಬುರಗಿ: ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್, ತನ್ನ ಸಾವಿಗೆ ಸಚಿವ ಈಶ್ವರಪ್ಪರವರೇ ನೇರ ಹೊಣೆಗಾರರೆಂದು ಡೆತ್ ನೋಟ್ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯವಾಗಿ ಡೆತ್ ನೋಟ್ ನಲ್ಲಿ ಗುತ್ತಿಗೆ ಕೆಲಸದ ಸಂಬಂದ ಶೇ 40 ಕಮಿಷನ್ ಗಾಗಿ ಒತ್ತಡ ಹೇರಿದ ವಿಚಾರವನ್ನು ಪ್ರಸ್ಥಾಪಿಸಿದ್ದಾರೆನ್ನಲಾಗಿದೆ. ಇದೊಂದು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ರಾಜ್ಯ ಸರಕಾರ ಈ ಕೂಡಲೇ ಸಚಿವ ಈಶ್ವರಪ್ಪರವರ ಮೇಲೆ ಕ್ರಿಮನಲ್ ಮೊಕದ್ದಮೆ ದಾಖಲಿಸಿ, ಬಂದಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ ಎಂದು ಪಕ್ಷದ ಜಿಲ್ಲಾ ಕಾರ್ಯಾದರ್ಶಿ ಕೆ ನೀಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ ವಿರೋಧಿಸಿ ಕಲಬುರಗಿಯಲ್ಲಿ SDPI ಪ್ರತಿಭಟನೆ

Contact Your\'s Advertisement; 9902492681

ಪ್ರತಿಯೊಂದು ಗುತ್ತಿಗೆ ಕೆಲಸದಲ್ಲಿ ರಾಜ್ಯ ಸರಕಾರದ ಸಚಿವರು, ಶಾಸಕರು, ಅಧಿಕಾರಿಗಳು, ಒಟ್ಟು ಕಾಮಗಾರಿಯ ಶೇ 40 ರಷ್ಢು ಕಮಿಷನ್ ಪಡೆಯುತ್ತಿರುವುದಾಗಿ ಮತ್ತು ಇದರಿಂದ ಕಾಮಗಾರಿ ನಿರ್ವಹಣೆಗೆ, ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗಿದೆಯೆಂದು, ಇದನ್ನು ತಡೆಯಲು ಅಗತ್ಯ ಕ್ರಮವಹಿಸುವಂತೆ ಸ್ವತಃ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ದೇಶದ ಪ್ರಧಾನ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಕಳೆದ ಐದಾರು ತಿಂಗಳುಗಳ ಹಿಂದೆಯೇ ಒತ್ತಾಯಿಸಿದುದನ್ನು ಇಲ್ಲಿ ಸಕಾರಣವಾಗಿ ನೆನಪಿಸಿಕೊಳ್ಳಬಹುದು.

ಸಿಪಿಐಎಂ ಪಕ್ಷವು ಸದರಿ ಪ್ರಕರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸಬೇಕೆಂದು ಮತ್ತು ಕಾಮಗಾರಿಗಳ ಕಳಪೆತನವನ್ನು ಹಾಗೂ ಕಾಮಗಾರಿಗಳು ನಡೆಯದೇ ಬಿಲ್ ಮಾಡುವುದನ್ನು ತಡೆಯುವಂತೆ ಮುಖ್ಯ ಮಂತ್ರಿಗೆ ಪತ್ರ ಬರೆದು ಒತ್ತಾಯಿಸಿತ್ತು ಎಂದು ನೀಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದಿನ ಕಲಬುರಗಿ ಪೇಟೆ ಧಾರಣೆ

ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿ ಸೂಕ್ತ ಕ್ರಮವಹಿಸಿದ್ದರೇ ಈ ದಿನ ದೇಶಕ್ಕೆ ಗುತ್ತಿಗೆ ಸೇವೆಯನ್ನು ಒದಗಿಸುತ್ತಿದ್ದ ಒಂದು ಅಮೂಲ್ಯ ಜೀವ ಸಂತೋಷ ಪಾಟೀಲ್ ನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ತಡೆಯ ಬಹುದಿತ್ತು. ಇದರಿಂದಾಗಿ ಅವರ ಕುಟುಂಬ ಬೀದಿಗೆ ಬೀಳುವಂತಾಯಿತು. ಈ ಕುರಿತು ಪರಿಣಾಮಕಾರಿ ಕ್ರಮ ತಗೆದುಕೊಳ್ಳದೇ ಜವಾಬ್ದಾರಿ ಹೀನ ರೀತಿಯ ವರ್ತನೆ ತೋರಿದುದು ತೀವ್ರ ಖಂಡನೀಯವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಸಮಧಾನ ವ್ಯಕ್ತಪಡಿಸಿದೆ.

ಈಗಲಾದರೂ ಇನ್ನಷ್ಠು ಗುತ್ತಿಗೆದಾರರು ಅತ್ಮಹತ್ಯೆಗಿಳಿಯದಂತೆ ಮತ್ತು ಅವರ ಕುಟುಂಬಗಳು ಬೀದಿ ಪಾಲಾಗದಂತೆ ತಡೆಯಲು ಸಂತೋಷ ಪಾಟೀಲ ಪ್ರಕರಣವೂ ಸೇರಿದಂತೆ ಒಟ್ಟು ಈ ಕಮಿಷನ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸುವಂತೆ ಸಿಪಿಐ(ಎಂ) ರಾಜ್ಯ ಸಮಿತಿಯು ಮರಳಿ ಒಕ್ಕೂಟ ಹಾಗೂ ರಾಜ್ಯ ಸರಕಾರಕ್ಕೆ ಆಗ್ರಹಿಸಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಆಧಾರಸ್ತಂಭ ಸಂವಿಧಾನ ಇಂದು ಅಪಾಯದಲ್ಲಿದೆ: ಸನತ್ ಕುಮಾರ್ ಬೆಳಗಲಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here