ರಾಜ್ಯದ ಎಲ್ಲಾ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ತನಿಖೆ ಮಾಡಿ: ವೆಂಕೋಬದೊರೆ

0
24

ಸುರಪುರ: ರಾಜ್ಯದಲ್ಲಿ ಇಂಜಿನಿಯರಿಂಗ್ ವಿಭಾದಲ್ಲಿ ಪರ್ಸೆಂಟೇಜ್ ದಂಧೆ ಹೆಚ್ಚಾಗಿದೆ.ಇದಕ್ಕೆ ತಾಜಾ ಉದಾಹರಣೆ ಎಂದರೆ ಬೆಳಗಾವಿಯ ಸಂತೋಷ ಪಾಟೀಲ್ ಆತ್ಮಹತ್ಯೆ ಕೇಸ್ ದಂಧೆಯನ್ನು ಬಯಲು ಮಾಡಿದೆ ಎಂದು ಕರ್ನಾಟಕ ರಾಜ್ಯ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಿಧನ ವಾರ್ತೆ: ಸೋಮಶೇಖರ ಮರಗೋಳ

Contact Your\'s Advertisement; 9902492681

ನಗರದ ಬಸ್ ನಿಲ್ದಾಣ ಬಳಿಯ ಮಡಿವಾಳ ಮಾಚಿದೇವ ವೃತ್ತದಲ್ಲಿ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ರಾಜ್ಯದಲ್ಲಿ ಪರ್ಸೆಂಟೇಜ್ ದಂಧೆ ನಡೆಯುತ್ತಿರುವ ಬಗ್ಗೆ ಈ ಹಿಂದೆಯೇ ರಾಜ್ಯದಲ್ಲಿನ ಗುತ್ತಿಗೆದಾರರ ಸಂಘ ಆರೋಪಿಸಿತ್ತು,ಈಗ ೪೦ ಪರ್ಸೆಂಟ್ ಕುರಿತು ಸಂತೋಷ ಪಾಟೀಲ್ ಆತ್ಮಹತ್ಯೆ ತಾಜಾ ಉದಾಹರಣೆಯಾಗಿದೆ.

ಇದನ್ನೂ ಓದಿ: 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ?: ಮಾಜಿ ಸಿಎಂ ಸಿದ್ದರಾಮಯ್ಯ

ಆದ್ದರಿಂದ ಕೂಡಲೇ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ರಾಜ್ಯದಲ್ಲಿನ ಎಲ್ಲಾ ಇಲಾಖೆಗಳಲ್ಲಿನ ಇಂಜಿನಿಯರಿಂಗ್ ವಿಭಾಗದಲ್ಲಿನ ಎಲ್ಲಾ ಅಧಿಕಾರಿಗಳ ತನಿಖೆ ನಡೆಸಿದಾಗ ಸಂಪೂರ್ಣ ಹಗರಣ ಹೊರ ಬರಲಿದೆ.ಆದ್ದರಿಂದ ರಾಜ್ಯಪಾಲರು ಕೂಡಲೇ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಆಂಜನೇಯ ಬೊಮ್ಮನಹಳ್ಳಿ,ಮುಕಪ್ಪ,ಕೃಷ್ಣಾ,ದೇವಪ್ಪ,ಅಶೋಕ,ನಾಗರಾಜ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here