ಮೊರಾರ್ಜಿ ದೇಸಾಯಿ ವಸತಿ ಶಾಲೆ: 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
18

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನವೋದಯ ಮಾದರಿ ವಸತಿ ಶಾಲೆಗಳಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ (ಆಂಗ್ಲ ಮಾಧ್ಯಮ) 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮುದ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರರಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಜಗನ್ನಾಥ ಶೇಗಜಿ ಆರೋಪ

Contact Your\'s Advertisement; 9902492681

ಪ್ರವೇಶ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳು ಮೀಸಲಿದ್ದು, ಇದರಲ್ಲಿ ಬಾಲಕಿಯರಿಗೆ ಶೇ. 50 ರಷ್ಟು ಸ್ಥಾನಗಳು ಮೀಸಲಿಡಲಾಗಿದೆ. ಇಚ್ಚೆಯುಳ್ಳ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಅನ್‍ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ವಸತಿ ಶಾಲೆಗಳಲ್ಲಿ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಲಿಂಕ್ https:// sevasindhuservices.karnataka.gov.in ಮೂಲಕ 2022ರ ಏಪ್ರಿಲ್ 22ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೆಬ್‍ಸೈಟ್‍ನ್ನು, ಸಹಾಯವಾಣಿ 827779990, 080-22535916, ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ: ರಾಜ್ಯದ ಎಲ್ಲಾ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ತನಿಖೆ ಮಾಡಿ: ವೆಂಕೋಬದೊರೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here