ಕಲಬುರಗಿ: ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಡಾ. ಮೇಧಾವಿನಿ ಕಟ್ಟಿ ಹೇಳಿದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಡಾ. ಬಾಬಾ ಸಾಹೇಬ್ ಭೀಮರಾವ ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ ಭೀಮರಾವ್ ರಾಮ್‍ಜಿ ಅಂಬೇಡ್ಕರ್ ಅವರು ಬಾಲ್ಯದಲ್ಲಿ ಅನುಭವಿಸಿದ ನೋವುಗಳು ಒಂದೇ-ಎರಡೇ? ಅದನ್ನು ಹೇಳುತ್ತಾ ಹೋದರೆ ನಿಜಕ್ಕೂ ಮನಸ್ಸಿಗೆ ನೋವಾಗುತ್ತದೆ ಅವರು ಕಷ್ಟ ಪಟ್ಟು ಇಡೀ ಮಾನವ ಜನಾಂಗಕ್ಕೆ ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಭಾರತದ ಸಂವಿಧಾನ ಶಿಲ್ಪಿ ಡಾ. ಭೀಮರಾವ್ ರಾಮ್ ಅಂಬೇಡ್ಕರ್
ಗುಲ್ಬರ್ಗ ವಿಶ್ವವಿದ್ಯಾಲಯದ ಮುಖ್ಯ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಮಾತನಾಡಿ ಅಂದಿನ ದಿನದಲ್ಲಿ ಕೆಳಜಾತಿಯ ಹುಡುಗನೊಬ್ಬ ಶಾಲೆಗೆ ಹೋಗಿ ಅಕ್ಷರ ಕಲಿಯುವುದು ಅಷ್ಟೊಂದು ಸುಲಭದ ಮಾತಾಗಿರಲಿಲ್ಲ. ಆದರೆ, ಅಂಬೇಡ್ಕರ್ ಅವರಿಗೆ ಚಿಕ್ಕಂದಿನಿಂದಲೇ ಓದಬೇಕು, ಏನನ್ನಾದರೂ ಸಾಧಿಸಬೇಕು ಎಂಬ ಛಲ ಇತ್ತು. ಹೀಗಾಗಿ ಭಾರತಕ್ಕೆ ಬೃಹತ್ ಸಂವಿಧಾನ ನೀಡಿದರು. ನಮ್ಮ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆಯಬೇಕು ಎಂದು ಹೇಳಿದರು.
ಗ್ರಂಥಪಾಲಕ ಡಾ. ಪ್ರವೀಣ್ ಕುಮಾರ್ ಕುಂಬಾರ ಮಾತನಾಡಿ ಅಂಬೇಡ್ಕರ್ ಅವರ ಇಡೀ ಜೀವನ ಅಸ್ಪೃಶ್ಯರೆನಿಸಿಕೊಂಡವರಿಗೆ ನ್ಯಾಯವನ್ನೂ, ಸಮಾನತೆಯನ್ನೂ ದೊರಕಿಸಿಕೊಡುವುದಕ್ಕೆ ಮುಡಿಪಾಗಿತ್ತು. ಇದರಲ್ಲಿ ಅವರು ಸಾಕಷ್ಟು ಯಶಸ್ಸನ್ನೂ ಸಾಧಿಸಿದ್ದರು.
ಇದನ್ನೂ ಓದಿ: ಅಂಬೇಡ್ಕರ್ ಎಂದರೆ ಹೋರಾಟದ ಒಂದು ಶಕ್ತಿ: ಬಸವರಾಜ ಹೆಳವರ
ಆದರೂ ಹಿಂದೂ ಧರ್ಮದ ಅಸಮಾನತೆಯಿಂದ ರೋಸಿಹೋಗಿದ್ದ ಅವರು ಬುದ್ಧನ ಕಾರುಣ್ಯದಲ್ಲಿ ಆಕರ್ಷಿತರಾಗಿ 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ನಡೆದ ಬೃಹತ್ ಸಮಾರಂಭವೊಂದರಲ್ಲಿ ತಮ್ಮ ಪತ್ನಿ ಡಾ.ಶಾರದಾ ಸೇರಿದಂತೆ ತಮ್ಮ ಅಪಾರ ಅಭಿಮಾನಿಗಳೊಡನೆ ಬೌದ್ಧಧರ್ಮಕ್ಕೆ ಸೇರಿದರು. ಬೌದ್ಧ ಧರ್ಮದಲ್ಲಿ ವೈಚಾರಿಕ ಚಿಂತನೆಗಳನ್ನು ಕಾಣುವುದಕ್ಕೆ ಸಾಧ್ಯವಿದೆ ಎಂದು ಅವರು ಹೇಳಿದರು. ಶ್ರೀಮತಿ ಮಮತಾ ಮೇಸ್ತ್ರಿ, ಡಾ. ರಾಜಕುಮಾರ ಎಂ. ದಣ್ಣೂರ, ಪ್ರವೀಣ ಪಟ್ಟಣಕರ್, ಡಾ. ಖೇಮಣ್ಣ ಅಲ್ದಿ, ನಿಂಗಪ್ಪ ಕರನಾಳಕರ್, ಶರಣಗೌಡ ಪಾಟೀಲ, ಗ್ರಂಥಾಲಯ ಸಿಬ್ಬಂದಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…