ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ಒಂದೆರಡು ದಿನದಲ್ಲಿ ರಾಜೀನಾಮೆ ಕೊಡಬಹುದು-ಹೆಚ್.ಡಿ.ಕುಮಾರಸ್ವಾಮಿ 

0
54
  • ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸೂಕ್ತ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
  • ಈಶ್ವರಪ್ಪ ಒಂದೆರಡು ದಿನದಲ್ಲಿ ರಾಜೀನಾಮೆ ಕೊಡಬಹುದು; ಅವರ ಬಗ್ಗೆ ಸಾಫ್ಟ್‌ ಕಾರ್ನರ್‌ ಇಲ್ಲ ಎಂದ ಮಾಜಿ ಸಿಎಂ

ರಾಮನಗರ: ಗುತ್ತಿಗೆದಾರ ಸಂತೋಷ್‌ ಸಾವಿನ ಹಿಂದೆ ಅನೇಕ ಅನುಮಾನಗಳು ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಚನ್ನಪಟ್ಟಣದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇವತ್ತು ಅಥವಾ ನಾಳೆ ರಾಜೀನಾಮೆ ಕೊಡಬಹುದು. ಅವರ ಹೈಕಮಾಂಡ್ ಈ ಬಗ್ಗೆ ಹೇಳುತ್ತಾರೆ ಅನ್ನಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಮೊದಲು ಅವರು ರಾಜೀನಾಮೆ ನೀಡುವುದು ಸೂಕ್ತ” ಎಂದರು.

Contact Your\'s Advertisement; 9902492681

ಇದನ್ನೂ ಓದಿ: ಅಂಬೇಡ್ಕರ್ ಅವರ ತತ್ವ,ಸಿದ್ದಾಂತ ಜನತೆಗೆ ಮಾರ್ಗದರ್ಶನ: ಡಾ. ಸತ್ಯಂಪೇಟೆ | Dr. Ambedkar Jayanti Celebration

ಸಂತೋಷ್ ಸಾವಿನ ಹಿಂದೆ ಹಲವಾರು ಸಂಶಯಗಳಿವೆ.‌ ಜನರಲ್ಲಿ ಅನೇಕ ಪ್ರಶ್ನೆಗಳೂ ಇವೆ. ಸತ್ಯಾಂಶವನ್ನು ಹೊರ ತರಲು ತನಿಖೆಯಾಗಬೇಕು. ಇದು ಸರಕಾರದ ಜವಾಬ್ದಾರಿ ಎಂದು ಅವರು ಹೇಳಿದರು.

ಮೃತ ವ್ಯಕ್ತಿ ನಾಲ್ಕು ಕೋಟಿ ರೂಪಾಯಿ ಕಾಮಗಾರಿ ಸರಕಾರದ ಕಾರ್ಯಾದೇಶ ಇಲ್ಲದೆ, ವರ್ಕ್ ಎಸ್ಟಿಮೇಟ್‌‌ ಇಲ್ಲದೇ ಕೆಲಸ ಮಾಡಿದ್ದು ಹೇಗೆ? ಅವರಿಗೆ ಕಾಮಗಾರಿ ಮಾಡಲು ಅನುಮತಿ ಕೊಟ್ಟವರು ಯಾರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಯಾವ ಎಂಜಿನಿಯರ್ ಅಥವಾ ಸರಕಾರಿ ಸಂಸ್ಥೆ ಗಮನಕ್ಕೆ ಬಾರದೇ ಪೇಮೆಂಟ್ ನೀಡಬೇಕು ಎಂದರೆ ತಾಂತ್ರಿಕ ಸಮಸ್ಯೆ ಇದೆ. ಇದರ ನಡುವೆ ಪರ್ಸೆಂಟೆಜ್ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ. ಈ ಕಾರಣಕ್ಕೆ ಸಂತೋಷ್ ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ಇವೆ. ಅಲ್ಲದೆ, ಮೃತ ವ್ಯಕ್ತಿಯ ಜತೆ ಇಬ್ಬರು ಸ್ನೇಹಿತರು ಹೋಗಿದ್ದರು ಎಂದ ಅವರು; ಸಂತೋಷ್ ಮಾತ್ರ ಒಂದು ಕೊಠಡಿಗೆ ಹೋಗಿದ್ದಾರೆ, ಉಳಿದ ಇಬ್ಬರು ಒಂದು ಕೊಠಡಿಗೆ ಏಕೆ ಹೋಗಿದ್ದರು? ಇವರೆಲ್ಲ ಉಡುಪಿಗೆ ಏಕೆ ಹೋಗಿದ್ದರು? ಸರಕಾರವು ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳನ್ನು ನೇಮಿಸಿ ಹಾಕಿ ತನಿಖೆ ನಡೆಸಿದರೆ ಸತ್ಯಾಸತ್ಯತೆ ಹೊರಬರುತ್ತದೆ ಎಂದರು.

ಇದನ್ನೂ ಓದಿ: ಗುತ್ತಿಗೆದಾರರಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಜಗನ್ನಾಥ ಶೇಗಜಿ ಆರೋಪ

ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಿಗೆ ತರಾಟೆ:  ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಕೊಲೆಯಾದ ಸಂದರ್ಭದಲ್ಲಿ ಬಿಜೆಪಿ ದಂಡೇ ಅಲ್ಲಿಗೆ ಹೋಯಿತು. ಅದಕ್ಕೆ ನಾವೇನು ಕಡಿಮೆ ಎಂದು ಸಾವಿನ ರಾಜಕಾರಣ ಮಾಡಲಿಕ್ಕೆ ಕಾಂಗ್ರೆಸ್‌ನ ನಾಯಕರ ದಂಡೇ ಈಗ ಸಂತೋಷ ಅವರ ಮನೆಗೆ ದಾಂಗುಡಿ ಇಟ್ಟಿದೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ನಾಯಕರೆಲ್ಲ ಕೈಕಟ್ಟಿ ಆ ಸಂತ್ರಸ್ತ ಹೆಣ್ಣುಮಗಳ ಮುಂದೆ ಕುಳಿತ ದೃಶ್ಯಗಳನ್ನು ನೋಡಿದರೆ ರಾಜಕೀಯ ಲಾಭ ಮಾಡಿಕೊಳ್ಳುವ ಉದ್ದೇಶ ಬಿಟ್ಟರೆ ಬೇರೇನೂ ಕಾಣದು ಎಂದು ಕುಮಾರಸ್ವಾಮಿ ಅವರು ಸಂಶಯ ವ್ಯಕ್ತಪಡಿಸಿದರು.

ಈಶ್ವರಪ್ಪರ ಬಗ್ಗೆ ನಾನೇಕೆ ಸಾಪ್ಟ್ ಆಗಲಿ. ನನಗೆ ಯಾವ ರೀತಿಯ ಸಾಫ್ಟ್‌ ಕಾರ್ನರ್‌ ಇಲ್ಲ. ಅವರ ಮೇಲೆ ಆರೋಪ ಬಂದಿದೆ. ಮೊದಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದನ್ನೂ ಓದಿ: ಬಿಜೆಪಿ ಕಮಿಷನ್ ಸರಕಾರ ನಡೆಸುತ್ತಿದೆ: ಶರಣ ಪ್ರಕಾಶ ಪಾಟೀಲ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here