ಬಿಸಿ ಬಿಸಿ ಸುದ್ದಿ

ಡಾ. ಅಂಬೇಡ್ಕರರು ನೀಡಿದ ಸಂವಿಧಾನ ವಿಶ್ವಕ್ಕೆ ಮಾದರಿ: ತಿಳಗೋಳ

ಕಲಬುರಗಿ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ.ಅಂಬೇಡ್ಕರ ಅವರ ಕೊಡುಗೆ ಮತ್ತು ಸಮಾಜಿಕ ಕಳಕಳಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹಿರಿಯ ನ್ಯಾಯವಾದಿ ಗುರುರಾಜ ತಿಳಗೋಳ ಅವರು ಹೇಳಿದರು.

ನಗರದ ಸುಪರ ಮಾರುಕಟ್ಟೆ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಅಖಿಲ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ರವರ ೧೩೧ನೇ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡಾ.ಅಂಬೇಡ್ಕರರು ಶ್ರೇಷ್ಠ ತತ್ವಜ್ಞಾನಿ. ಆದರ್ಶ ಮತ್ತು ಮಾದರಿ ನಾಯಕರಾಗಿದ್ದಾರೆ ಎಂದರು.

ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆಗೆ ಚಂದು ಪಾಟೀಲ ಪುಷ್ಪ ನಮನ

ನಿವೃತ್ತ ಪೊಲೀಸ ಅಧಿಕಾರಿ ವಿಠಲ ಸಗರ ಅವರು ಮಾತನಾಡಿ, ದೀನದಲಿತರು ಸೇರಿದಂತೆ ಎಲ್ಲ ಸಮುದಾಯದ ಕಲ್ಯಾಣಕ್ಕಾಗಿ ಶ್ರಮಿಸಿದ ಡಾ.ಅಂಬೇಡ್ಕರ ಅವರು ಲೋಕ ನಾಯಕರಾಗಿದ್ದಾರೆ. ಎಂದರು. ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂಯ೯ವಂಶಿ ಮಾತನಾಡಿ, ಶ್ರಮಿಕ ಶೋಷಿತ ವರ್ಗಗಳು ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸಲು ಡಾ.ಅಂಬೇಡ್ಕರ ಅವರು, ಸಂವಿಧಾನ ಬದ್ಧವಾದ ಹಕ್ಕನ್ನು ನೀಡುವ ಮೂಲಕ ಸಮಾಜಿಕ ನ್ಯಾಯವನ್ನು ಕಲ್ಪಿಸಿದ ಜನನಾಯಕರು ಎಂದರು.

ನ್ಯಾಯವಾದಿ ಗುರುರಾಜ ತಿಳಗೋಳ, ನಿವೃತ್ತ ಪೋಲಿಸ ಅಧಿಕಾರಿ ವಿಠ್ಠಲ ಸಗರ, ಮಾಜಿ ಉಪ ಮೇಯರ ಬಾಬು ಸೋಂಟನೂರ, ವೆಂಕಟೇಶ ಕಾಂಬಳೆ, ಚಂದ್ರಹಾಸ ಚಿದ್ರಿ, ನಾಗರಾಜ ಸೋಲಾಪೂರಕರ, ರಾಘವೇಂದ್ರ ಕುಲಕರ್ಣಿ, ಲಕ್ಷ್ಮೀ, ರಾಮಚಂದ್ರ ನಾಟೀಕಾರ, ಜೈಕನ್ನಡಿಗರ ಸೇನೆ ಅಧ್ಯಕ್ಷ ದತ್ತು ಭಾಸಗಿ, ಶಿವಕುಮಾರ ಬಾಗೋಡಿ, ರಾಮಾ ಪೂಜಾರಿ, ಬಾಬು ಶೇಖ್ ಪರಿಟ್, ಉಮೇಶ ವಾಲಿಕಾರ, ವೆಂಕಟೇಶ ಕಾಂಬಳೆ, ಶಿವರಾಜ ಕಾಂಬಳೆ ಸೇರಿದಂತೆ ಹಲವರ ಭಾಗವಹಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ಜಯಂತ್ಯುತ್ಸವ: ಚಂದು ಪಾಟೀಲ ಅನ್ನಸಂತರ್ಪಣೆ

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

4 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

11 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

11 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

22 hours ago