ಶಹಾಬಾದ: ತಾಲೂಕಿನ ಭಂಕೂರ ಗ್ರಾಮ ಪಂಚಾಯತಿಯಲ್ಲಿ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಾಬ ಸಾಹೇಬ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಕಸ ಸಂಗ್ರಹಣೆಗಾಗಿ ಕಸದ ಬುಟ್ಟಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ರಜನಿಕಾಂತ ಕಂಬಾನೂರ ಮಾತನಾಡಿ, ಜಾತಿಯತೆ ಆಧಾರದ ಮೇಲೆ ಸಮಾಜ ತನ್ನನ್ನು ನಡೆಸಿಕೊಂಡ ರೀತಿಯಿಂದ ರೋಸಿಹೋದ ಅಂಬೇಡ್ಕರ್ ಅವರು ದೇಶದ ಎಲ್ಲಾ ತಳ ಸಮುದಾಯಗಳಿಗೆ ನ್ಯಾಯ ಒದಗಿಸುವಂತ ಸಂವಿಧಾನ ರಚನೆ ಮಾಡಿದ್ದಾರೆ.
ಇದನ್ನೂ ಓದಿ: ಅಂಬೇಡ್ಕರ್ ದೇಶದ ಶ್ರಮಿಕ, ಕಾರ್ಮಿಕ, ಶೋಷಿತರ ಶಕ್ತಿಯಾಗಿದ್ದರು
ಅಂಬೇಡ್ಕರ್ ಜಯಂತಿ ಕೇವಲ ಆಚರಣೆಗೆ ಸೀಮಿತವಾಗಬಾರದು, ಎಲ್ಲಾ ಜನರು ಅಂಬೇಡ್ಕರ್ ಅವರ ಆಶಯಗಳನ್ನು, ತತ್ವಗಳನ್ನು ಜಾರಿಗೊಳಿಸುವಂತ ಕೆಲಸ ಮಾಡಬೇಕಿದೆ. ಯುವ ಜನಾಂಗಕ್ಕೆ ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕಿದೆ. ಇದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು.ಅಲ್ಲದೇ ಗ್ರಾಪಂನ ೧೫ ನೇ ಹಣಕಾಸು ಯೋಜನೆಯಡಿಯಲ್ಲಿ ಹಸಿ ಕಸ-ಒಣಕಸ ವಿಂಗಡಿಸಲು ಕಸದ ಬುಟ್ಟಿಯನ್ನು ನೀಡುತ್ತಿದ್ದೆವೆ.ಅದನ್ನು ಸರಿಯಾದ ಕ್ರಮದಲ್ಲಿ ಬಳಸಬೇಕೆಂದು ಹೇಳಿದರು.
ಗ್ರಾಪಂ ಸದಸ್ಯ ಲಕ್ಷ್ಮಿಕಾಂತ ಕಂದಗೂಳ ಮಾತನಾಡಿ, ಕಸವನ್ನು ರಸ್ತೆಯಲ್ಲಿ ಸುರಿಯದೆ ಪಂಚಾಯಿತಿ ವತಿಯಿಂದ ನೀಡಿರುವ ಕಸದ ಬುಟ್ಟಿಯಲ್ಲಿ ಹಾಕಿ ಪ್ರತಿಯೊಬ್ಬರು ಸ್ವಚ್ಛತೆ ಕಾಪಾಡಬೇಕು.ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಯಾವುದೇ ರೀತಿಯ ರೋಗಗಳು ಹರಡದೇ ಇರಲು ಮುಂಜಾಗ್ರತೆ ಯಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಅದರಂತೆ ಈಗ ಕಸದ ಬುಟ್ಟಿಗಳನ್ನು ನೀಡುತ್ತಿದ್ದು, ಕಸದ ಬುಟ್ಟಿಯಲ್ಲಿ ಹಸಿಕಸ-ಒಣಕಸ ಪ್ರತ್ಯೇಕಿಸಿ ಇಡಿ. ಪ್ರತಿ ದಿನ ಕಸ ವಿಲೇವಾರಿ ವಾಹನ ಬರುತ್ತದೆ ಕಸವನ್ನು ಎಲ್ಲೆಂದರಲ್ಲಿ ಸುರಿಯದೆ ವಾಹನಕ್ಕೆ ಹಾಕಿ ಸಹಕರಿಸಿ ಎಂದರು.
ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್ ದಮನಿತ ವರ್ಗಗಳ: ಶೋಷಿತರ ಆದರ್ಶ ಚೇತನ
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಶಿವಯೋಗಿ ಬಣ್ಣಕಾರ, ಮಲ್ಲಿಕಾರ್ಜುನ ಧರಿ, ಗ್ರಾಮಸ್ಥರಾದ ಮಲ್ಲಿಕಾರ್ಜುನ ನಾಲವಾರ,ಶಾಂತು ಸೌಕಾರ, ಪ್ರಕಾಶ ಪಾಟೀಲ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…