ಕಲಬುರಗಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಈಶ್ವರಪ್ಪ ವಿಳಂಬವಾದರೂ ತಮ್ಮ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಇಷ್ಟಕ್ಕೆ ಪ್ರರ್ಕರಣ ಮುಗೋದಿಲ್ಲ. ಸದರಿ ಪ್ರಕರಣದ ಎಫ್‍ಐಆರ್‍ನಲ್ಲಿ ಆರೋಪಿ ನಂಬರ್ ಒನ್ ಆಗಿರುವ ಈಶ್ವರಪ್ಪರನ್ನ ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ನೀಡಿರುವ ಡಾ. ಅಜಯ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಸಾವನ್ನಪ್ಪಿದ ಗುತತಿಗೆದಾರ ತಮ್ಮ ಹೆಸರು ನೇರಾನೇರ ಪ್ರಸ್ತಾಪಿಸಿದರು ಭಂಡತನಿದಂದ ಈಶ್ವರಪ್ಪ ರಾಜೀನಾಮೆ ನೀಡದೆ ಕುಲಿತಿದ್ದರು. ಇದು ನೋಡಿದರೆ ಅವರ ಬಂಡತನ ಅದೆಷ್ಟಿದೆ ಎಂಬುದು ಗೊತ್ತಾಗುತ್ತದೆ. ಕೊನೆಗೂ ರಾಜೀನಾಮೆ ನೀಡಿದ್ದಾರೆ. ಇದೀಗ ಪೆÇಲೀಸರು ಕಾನೂನು ರೀತ್ಯಾ ಅವರನ್ನು ವಶಕ್ಕೆ ಪಡೆದು ಪ್ರಕರಣದ ವಿಚಾರಣೆ ಚುರುಕಾಗಿಸಬೇಕು, ನಿಷ್ಪಕ್ಷಪಾತ ವಿಚಾರಣೆ ನೆಸಿ ಸಂತೋಷನ ಸಾವಿಗೆ ನ್ಯಾಯ ಕೊಡಬೇಕು ಎಂದಿದ್ದಾರೆ.
ಇದನ್ನೂ ಓದಿ: ಅಂಬೇಡ್ಕರ್ ಜಯಂತಿಯಲ್ಲಿ ಕಸದ ಬುಟ್ಟಿ ವಿತರಣೆ
ಶೇ. 40ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವ ಬದಲು ರಾಜ್ಯ
ಸರ್ಕಾರ ನ್ಯಾಯ ಕೇಳಿದ ಕಾಂಗ್ರೆಸ್ಸಿಗರಾದ ನಮ್ಮನ್ನೇ ಬಂಧಿಸಿದೆ. ಬಲಪ್ರಯೋಗದ ಮೂಲಕ ನಮ್ಮನ್ನು ಸುಮ್ಮನಾಗಿಸಬಹುದು ಎಂದು ಅಂದುಕೊಂಡಿದ್ದರೆ ಅದು ಸರ್ಕಾರದ ಮಹಾ ಮೂರ್ಖತನವೆಂದು ಹೇಳಿರುವ ಡಾ. ಅಜಯ್ ಸಿಂಗ್ ಸಾವನ್ನಪ್ಪಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ನ್ಯಾಯ ಸಿಗುವವರೆಗೆ ಕಾಂಗ್ರೆಸ್ ಪಕ್ಷದ ಹೋರಾಟ ನಿಲ್ಲೋದಿಲ್ಲ ಎಂದಿದ್ದಾರೆ.
ಗುತ್ತಿಗೆದಾರ ಸಂತೋಷನ ಸಾವಿನ ಪ್ರಕರಣದಲ್ಲಿ ಈಶ್ವರಪ್ಪ ಹೆಸರು ನೇರವಾಗಿ ಪ್ರಸ್ತಾಪವಾಗಿ ಇದರಿಂದಾಗಿ ರಾಜ್ಯ ಸರ್ಕಾರ ರಾಜ್ಯದ ಜನರೆದುರು ಬೆತ್ತಲಾಗಿದೆ. ಜನತೆಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣ ಚಿತ್ರಣ ದೊರಕಿದೆ. ಜನರೇ ಬರುವ ದಿನಗಳಲ್ಲಿ ಬಿಜೆಪಿಗರಿಗೆ ಪಾಠ ಕಲಿಸುತ್ತಾರೆಂದು ಡಾ. ಅಯ್ ಸಿಂಗ್ ಕುಟುಕಿದ್ದಾರೆ.
ಇದನ್ನೂ ಓದಿ: ಭಾಲ್ಕಿ ಸಂಸ್ಥಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಆರೋಪಿ ಸ್ಥಾನದಲ್ಲಿರುವ ಈಶ್ವರಪ್ಪ ಅವರ ಹೇಳಿಕೆಗಳಿಗೆ ಮಹತ್ವ ನೀಡಬೇಕಾದ ಅಗತ್ಯ ಇಲ್ಲ. ತಕ್ಷಣ ಪೆÇಲೀಸ್ ತಮ್ಮ ಕಾನೂನು ಪ್ರಕಾರ ಅವರನ್ನು ಬಂಧಿಸಬೇಕು. ಮೃತನ ಪತ್ನಿಗೆ ಉದ್ಯೋಗ ನೀಡುವತ್ತ ಸರ್ಕಾರ ಯೋಚಿಸಬೇಕು. ಸಂತೋಷ್ ಪಾಟೀಲ್ ಸಾಲ ಮಾಡಿದ ಹಣದಲ್ಲಿ ಪೂರ್ಣಗೊಳಿಸಿದ್ದ ರೂ. 4 ಕೋಟಿ ವೆಚ್ಚದ ಎ¯್ಲÁ ಕಾಮಗಾರಿಯ ಬಿಲ್ ಅನ್ನು ರಾಜ್ಯ ಸರ್ಕಾರ ಈ ಕೂಡಲೇ ಸಂದಾಯ ಮಾಡಬೇಕು ಎಂದೂ ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…