ಬೆಂಗಳೂರು: ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರುವವರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ದೂರು ನೀಡಿರೋ ಸಂಬಂಧ ಅತೃಪ್ತ ಶಾಸಕರನ್ನು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರು ಸಮಯಾವಕಾಶ ಕೋರಿದ್ದಾರೆ.
ಅತೃಪ್ತ ಶಾಸಕರು ವಿಚಾರಣೆಗೆ ಹಾಜರಾಗಲು ಸಮಯಾವಕಾಶ ನೀಡುವಂತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದು ಕಲಾವಕಾಶ ಕೋರಿದ್ದಾರೆ ಎನ್ಮಲಾಗಿದೆ.
ಶಾಸಕ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ಅಂಗೀಕರಿಸಲು ಸೂಚಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಾಗಿದ್ದು, ಇದೀಗ ನಮ್ಮನ್ನು ಅನರ್ಹಗೊಳಿಸುವ ಕುರಿತು ಪತ್ರ ಬರೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ನಮ್ಮ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಕೆಲ ಅನಿವಾರ್ಯ ಕಾರಣಗಳಿಂದ ನಾವು ಹೊರಗಡೆ ಇದ್ದು ನಿಮ್ಮ ಪ್ರಶ್ನೆಗೆ ಉತ್ತರಿಸಲು ನಮಗೆ ಸಮಯ ಬೇಕು ಎಂದು ಸ್ಪೀಕರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದಿದ್ದಾರೆ.