ಬೆಂಗಳೂರು: ಮಾಜಿ ಶಾಸಕ ಹಾಗೂ ಎಡಪಂಥೀಯ ಹೋರಾಟಗಾರ ಜಿ ವಿ ಶ್ರೀರಾಮ ರೆಡ್ಡಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ನಾಳೆಯಿಂದ ಜನತಾ ಜಲಧಾರೆ ಆರಂಭ: ಕೃಷ್ಣರಾಜ ಸಾಗರದಲ್ಲಿ ದೇವೇಗೌಡರು, ಆಲಮಟ್ಟಿಯಲ್ಲಿ ಹೆಚ್’ಡಿಕೆ ಜಲಸಂಗ್ರಹ
ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು ಎಂದಿರುವ ಅವರು, ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದರೆ.
ಇದನ್ನೂ ಓದಿ: ’ಡಾ ಅಂಬೇಡ್ಕರರ ಚಿಂತನೆ ಶೋಷಿತರಿಗೆ ತಲುಪಿಸಿರಿ’: ಗುರುಪಾದ ಕೋಗನೂರ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…