ಮಳಿಗೆಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ ಆದೇಶ ಹೊರಡಿಸಲು ಆಗ್ರಹ

0
44

ಕಲಬುರಗಿ: ಅಂಗಡಿ, ಮುಂಗಟ್ಟುಗಳ ಮುಂದೆ ಆಂಗ್ಲ ಭಾಷೆಯ ನಾಮಫಲಕವನ್ನು ತೆಗೆದು ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಹಾಕಲು ಆದೇಶಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಆನಂದ್ ಎಸ್. ದೊಡ್ಡಮನಿ ಹಾಗೂ ನಗರ ಪ್ರಧಾನ ಕಾರ್ಯದರ್ಶಿ ಸುರೇಶ್ ಜಿ. ಹೊಸಮನಿ ಅವರು ಒತ್ತಾಯಿಸಿದರು.

ಇದನ್ನೂ ಓದಿ: ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಚಂದ್ರಶೇಖರ್ ಪಾಟೀಲ್ ರೇವೂರ್ 12ನೇ ಪುಣ್ಯಸ್ಮರಣೋತ್ಸವ

Contact Your\'s Advertisement; 9902492681

ಮಹಾನಗರ ಪಾಲಿಕೆಯ ಆಯುಕ್ತರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ ಅವರು, ನಗರದ ಎಲ್ಲ ಅಂಗಡಿ, ಮುಂಗಟ್ಟುಗಳು ವ್ಯಾಪಾರದ ಸ್ಥಳಗಳಲ್ಲಿ ಆಂಗ್ಲ ಭಾಷೆಯ ನಾಮಫಲಕಗಳು ಇವೆ. ಇದರಿಂದ ಕನ್ನಡ ಭಾಷೆ ಮತ್ತು ಕನ್ನಡಾಂಬೆಗೆ ಅವಮಾನ ಮಾಡಿದಂತಾಗುತ್ತದೆ. ಕನ್ನಡ ನಾಡಿನ ಅನ್ನ ತಿಂದು, ನೀರು ಕುಡಿದು, ಇನ್ನಿತರ ಎಲ್ಲ ಸೌಕರ್ಯಗಳನ್ನು ಪಡೆದುಕೊಂಡು ಆಂಗ್ಲ ಭಾಷೆಯ ನಾಮಫಲಕಗಳನ್ನು ಹಾಕುವುದು ಯಾವ ನ್ಯಾಯ? ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರದ ನಿಯಮಾವಳಿಗಳ ಪ್ರಕಾರ ಕನಿಷ್ಠ ಒಂದು ನಾಮಫಲಕದಲ್ಲಿ ಶೇಕಡಾ ೬೦ ರಷ್ಟು ಕನ್ನಡ ಭಾಷೆಯ ನಾಮಫಲಕ ಇರಬೇಕು. ಆದಾಗ್ಯೂ, ನಿಯಮಗಳನ್ನು ಗಾಳಿಗೆ ತೂರಿರುವ ಅಂಗಡಿಗಳು ಹಾಗೂ ಮಾಲ್‌ಗಳ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕಲಬುರಗಿಯಲ್ಲಿ ‘ಗುಡ್ ಫ್ರೆಡೆ ’ ಆಚರಣೆ

ಒಂದು ವಾರದೊಳಗೆ ಈ ಕುರಿತು ಆದೇಶ ಹೊರಡಿಸಬೇಕು ಎಂದು ಗಡುವು ನೀಡಿದ ಅವರು, ಒಂದು ವೇಳೆ ನಿರ್ಲಕ್ಷ್ಯ ವಹಿಸಿದಲ್ಲಿ ಆಂಗ್ಲ ಭಾಷೆಯ ನಾಮ ಫಲಕಗಳಿಗೆ ಕಪ್ಪು ಮಸಿ ಬಳಿದು ಉಗ್ರ ಹೋರಾಟ ರೂಪಿಸ ಲಾಗುತ್ತದೆ . ಹೋರಾಟದಲ್ಲಿ ಏನಾದರೂ ಅನಾಹುತ ಆದಲ್ಲಿ ಅದಕ್ಕೆ ಪಾಲಿಕೆ ಹೊಣೆಯಾಗಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಾಗರ್ ಡಿ. ಅಭಿಷೇಕ್ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಉಪನ್ಯಾಸಕರ ಸಂಘದಿಂದ 371ಜೆ ವಿಚಾರ ಸಂಕಿರಣ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here