ಬಿಸಿ ಬಿಸಿ ಸುದ್ದಿ

ಗಲಭೆಗಳಿಗೆ ಬಿಜೆಪಿ ಸರಕಾರ ಕುಮ್ಮಕ್ಕು ನೀಡುತ್ತಿದೆ: ಖಂಡ್ರೆ ಕಿಡಿ

ಕಲಬುರಗಿ: ಗಲಭೆಗಳಿಗೆ ಸರಕಾರ ಕುಮ್ಮಕ್ಕು ನೀಡುತ್ತಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಾಮರಸ್ಯ ಕಾಪಾಡಬೇಕು. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ಬಿಟ್ಟು ಬಿಜೆಪಿ ತನ್ನ ತಪ್ಪುಗಳನ್ನು ಮುಚ್ಚಿ ಹಾಕುತ್ತಿದೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ‌ ಎಂದರು‌. ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ಮುಂದುವರಿಸಿದ ಖಂಡ್ರೆ, ರಾಜ್ಯದಲ್ಲಿ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ.

ಇದನ್ನೂ ಓದು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ | JDS State President

ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಇದಕ್ಕೆ ಬಿಜೆಪಿಯವರೇ ಕಾರಣ. ಮಾಜಿ ಸಚಿವ ಈಶ್ವರಪ್ಪ ಅವರ ಹೆಸರು ಬರೆದು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು. ಆದ್ರೆ, ಸರ್ಕಾರ ಈಶ್ವರಪ್ಪರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು. ತನಿಖೆ ಪ್ರಾರಂಭವಾಗುವ ಮುನ್ನವೇ ಈಶ್ವರಪ್ಪ ತಪ್ಪು ಮಾಡಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಬಿಜೆಪಿಗರ ವರ್ತನೆಯಿಂದಲೇ ರಾಜ್ಯದ ಜನತೆ ಎಲ್ಲವನ್ನೂ ತಿಳಿದುಕೊಳ್ಳುತ್ತಾರೆ ಎಂದರು.

ಇದನ್ನೂ ಓದು: ಪಿಎಸ್‌ಐ ಅಕ್ರಮ: 6 ಜನರ ಬಂಧನ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago