ಕಲಬುರಗಿ: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಕಾರ್ಯಕರ್ತೆ, ಬಿಜೆಪಿ ನಾಯಕಿಯಾಗಿರುವ ದಿವ್ಯ ಹಾಗರಗಿ ಹೆಸರು ಕೇಳಿಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದಿವ್ಯ ಹಾಗರಗಿ ಅವರ ಮನೆಯ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿರುವ ವೇಳೆ ನಾಪತೆಯಾಗಿರುವುದು ಹಲವು ಅನುಮಾನಗಳಿಗೆಡೆ ಮಾಡಿಕೊಟ್ಟಿದೆ.
ದಿವ್ಯ ಹಾಗರಗಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಡೆದ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ.
ಇದನ್ನೂ ಓದಿ: ಗಲಭೆಗಳಿಗೆ ಬಿಜೆಪಿ ಸರಕಾರ ಕುಮ್ಮಕ್ಕು ನೀಡುತ್ತಿದೆ: ಖಂಡ್ರೆ ಕಿಡಿ
ಭಾನುವಾರ ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಕಲಬುರಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ನಾಯಕಿ ಹಾಗೂ ಹಿಂದೂಪರ ಕಾರ್ಯಕರ್ತೆ ದಿವ್ಯಾ ಹಾಗರಗಿ ಮನೆಗೆ ತಪಾಸಣೆಗೆ ಆಗಮಿಸಿದರು. ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ದಿವ್ಯಾ ಅವರ ಪತಿ ರಾಜೇಶ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.
ದಿವ್ಯಾ ಹಾಗರಗಿ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ನಾಯಕರೆಲ್ಲರಿಗೂ ಹತ್ತಿರದವರಾಗಿದ್ದು, ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ. ಸದ್ಯಕ್ಕಂತೂ ಸಿಐಡಿಯ ನೇತೃತ್ವದಲ್ಲಿ ತನಿಖೆ ಸರಿಯಾದ ದಿಕ್ಕಿನತ್ತ ಸಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ | JDS State President
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…