ಶಹಾಬಾದ: ಇಂದಿನ ವೈಜ್ಞಾನಿಕ ಯುಗದಲ್ಲಿ ಅನೇಕ ಒತ್ತಡಗಳಿಂದ ಮನುಷ್ಯ ದುಶ್ಚಟಗಳ ದಾಸನಾಗುತ್ತಿದ್ದು, ಅದರಿಂದ ಹೊರಬಂದು ಶಾಂತಿ, ನೆಮ್ಮದಿಯಿಂದ ಜೀವನ ನಡೆಸಬೇಕಾದರೆ ಪುರಾಣ ಪ್ರವನಗಳು ಕೇಳುವುದು ಅವಶ್ಯ ಎಂದು ತೊನಸಿನಹಳ್ಳಿ(ಎಸ್) ಗ್ರಾಮದ ರೇವಣಸಿದ್ಧ ಚರಂತೇಶ್ವರ ಶಿವಾಚಾರ್ಯರು ಹೇಳಿದರು.
ಅವರು ಶನಿವಾರ ಸಮೀಪದ ತೊನಸಿನಹಳ್ಳಿ(ಎಸ್) ಗ್ರಾಮದ ಸಂಗಮೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ರೇವಣಸಿದ್ಧ ಚರಂತೇಶ್ವರ ಶಿವಾಚಾರ್ಯರ ೧೫ನೇ ಪಟ್ಟಾಧಿಕಾರದ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಶರಣಬಸವೇಶ್ವರ ಪುರಾಣ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
ಇದನ್ನೂ ಓದಿ: ಕಲಬುರಗಿ: ಗುಡುಗು, ಗಾಳಿ, ಆಣೆಕಲ್ಲು ಸಹಿತ ಮಳೆ
ದುಶ್ಚಟಗಳು ಮನುಷ್ಯನ ಚಿಂತನೆ ಮಾಡುವ ಶಕ್ತಿಯನ್ನು ಕುಂದಿಸುತ್ತದೆ. ತಾನು ಹಾಳಾಗುವುದಲ್ಲದೇ ಸಮಾಜಕ್ಕೂ ಕಂಟಕನಾಗಿ ಹೊರಹೊಮ್ಮುತ್ತಾನೆ. ಧಾರ್ಮಿಕ ಆಚರಣೆಗಳು ಮನುಷ್ಯರಲ್ಲಿ ಮಹತ್ತರವಾದ ಬದಲಾವಣೆ ತರುವುದರ ಜೊತೆಗೆ ಸದ್ಗುಣ,ಸನ್ನಡತೆಯನ್ನು ಬೆಳೆಸುತ್ತವೆ. ಅಲ್ಲದೇ ಮಾನಸಿಕ ನೆಮ್ಮದಿ ನೀಡುತ್ತವೆ.ಇದರಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಹೇಳಿದರು.
ಕುಳೆಗುಮಟಗಿಯ ಗುರುಸ್ವಾಮಿ ಶರಣರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಸಾಮಾಜಿ ಸಮಸ್ಯೆಗೆ ಆಧ್ಯಾತ್ಮಿಕ ಬಡತನವೇ ಕಾರಣವಾಗಿದೆ.ಮಠ-ಮಂದಿರಗಳಲ್ಲಿ ನಡೆಯುವ ಪುರಾಣ-ಪ್ರವಚನಗಳಿಂದ ನಮ್ಮಲ್ಲಿ ಆಧ್ಯಾತ್ಮಿಕ ಸಂಪತ್ತನ್ನು ವೃದ್ಧಿಸಿ ನೈತಿಕ ಪ್ರಜ್ಞೆ, ಸಾಮಾಜಿಕ ಮೌಲ್ಯ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೆಳೆಸಿಕೊಂಡು ಬರುತ್ತಿರುವುದು ಶ್ಲಾಘನೀಯವಾದುದು.ಸಾರ್ಥಕ ಜವನಕ್ಕೆ ಆಧ್ಯಾತ್ಮಿಕ ಜ್ಞಾನ ಅಗತ್ಯವಾಗಿಬೇಕಾಗಿದೆ.ಇದು ಮಾನವನ ಜೀವನಕ್ಕೆ ಆಧಾರ ಸ್ತಂಭವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ವಚನ ಜಾತ್ರೆ-೨೦೨೨ ರಲ್ಲಿ ವಿವಿಧ ಸಾಧಕರಿಗೆ ಗೌರವ ಸನ್ಮಾನ
ಯರಗೋಳ ಶ್ರೀಗಳು, ಕೊಟ್ಟೂರೇಶ್ವರ ಶ್ರೀಗಳು, ಮಡಿವಾಳಯ್ಯ ಶಾಸ್ತ್ರಿಗಳು ಜೆರಟಗಿ, ಮಲ್ಲಿಕಾರ್ಜುನ ಗೋಳೇದ್,ನಿಂಗಣ್ಣಗೌಡ ಮಾಲಿಪಾಟೀಲ್,ಅಯ್ಯಣ್ಣ ಬಂದಳ್ಳಿ, ಬಸವರಾಜ ಭಮ್ಮಶೆಟ್ಟಿ, ಅಭಿಷೇಕಪಾಟೀಲ, ಮಲ್ಲು ಗೊಳೇದ್,ಶ್ರೀಶೈಲ್ ರಾಮಶೆಟ್ಟಿ, ಶಿವಲಿಂಗಪ್ಪ ಗೊಳೇದ್, ಬೆಳ್ಳಪ್ಪ ಭಂಡಾರಿ, ಸಂಗಮೇಶ ರಾಮಶೆಟ್ಟಿ, ವಿರೇಶ ರಾಮಶೆಟ್ಟಿ, ಬಸವರಾಜ ಮದ್ರಿಕಿ ಸೇರಿದಂತೆ ಮಹಿಳೆಯರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…