ಸುರಪುರ:ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು ಕೂಡಲೇ ಇದನ್ನು ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆಗ್ರಹಿಸಿದರು.
ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಮಾತನಾಡಿ,ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ.ಇಂದು ರಾಜ್ಯದಲ್ಲಿ ೪೦ ಪರ್ಸೆಂಟ್ ದಂಧೆ ಹೊರಬರುತ್ತಿದ್ದು ಅದು ಕೆಬಿಜೆಎನ್‌ಎಲ್ ಇಲಾಖೆಯಲ್ಲೂ ಇದೆ ಎಂದು ಆರೋಪಿಸಿದರು.ಅಲ್ಲದೆ ಲೋಕಪಯೋಗಿ ಇಲಾಖೆ,ಪಿಆರ್‌ಇಎಮ್‌ಐ ಸೇರಿದಂತೆ ಅನೇಕ ಸಕರಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತನಿಖೆ ನಡೆಸಬೇಕೆಂದು ಹಾಗೂ ತನಿಖೆ ನಡೆಸುವವರೆಗೆ ಯಾವುದೇ ಬಿಲ್‌ಗಳನ್ನು ಮಾಡಬಾರದು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ವೆಂಚುರ್ಸ ವಿತ್ ಇಂಟಲೆಕ್ಚಯುಲ್ ಪ್ರಾಪರ್ಟಿ ರೈಟ್ಸ (CIPAM)
ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳ ಸಾಲು ಕಂಡುಬಂತು,ಟೈರ್‌ಗೆ ಬೆಂಕಿ ಹಚ್ಚಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ಸುನಿಲ ಪುಲ್ಸೆ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ,ಪ್ರಧಾನ ಕಾರ್ಯದರ್ಶಿ ಭೀಮರಾಯ ಸಿಂದಗೇರಿ,ಮುಖಂಡರಾದ ರಾಜು ದರಬಾರಿ,ಕೃಷ್ಣಾ ಕಕ್ಕೇರಿ,ಶಿವಶಂಕರ ಬೊಮ್ಮನಹಳ್ಳಿ, ಬಸ್ಸು ಗುತ್ತೇದಾರ,ಬಸ್ಸು ಬೊಮ್ಮನಹಳ್ಳಿ,ದೇವಪ್ಪ,ರಾಮು ನಾಯಕ,ಕೇಶವ ನಾಯಕ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…