ಲಿಂಗಸೂಗೂರು: ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರಾದ ಹಕ್ಕ-ಬುಕ್ಕ ಸೇರಿ ಆ ಕಾಲಘಟಕದ ರಾಜಮನೆತನಗಳ ಹಾಗೂ ಮಹಾರಾಜರ ಕುರಿತು ಸತ್ಯ ಶೋಧನೆಯೊಂದಿಗೆ ಇನ್ನಷ್ಟು ಹೊಸ ಹೊಸ ಆಯಾಮಗಳಲ್ಲಿ ಸಂಶೋಧನೆಗಳು ನಡೆಯಬೇಕಿದೆ ಎಂದು ಕಲಬುರಗಿಯ ಪತ್ರಕರ್ತ ಪ್ರಕಾಶ ದೊರೆ ಅಭಿಪ್ರಾಯಪಟ್ಟರು.
ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಸೋಮವಾರ ಕುಮಾರರಾಮ ಇತಿಹಾಸ ಸಂರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ವಿಜಯನಗರ ಸಾಮ್ರಾಜ್ಯ ಸಂಸ್ಥಾಪಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ:ಪಿಎಸ್ಐ ಅಕ್ರಮ ನೇಮಕಾತಿ: ಗೃಹ ಸಚಿವರ ರಾಜೀನಾಮೆಗೆ ಆಗ್ರಹ
ಹೊಸ ಸಂಶೋಧನೆಗಳ ಮೂಲಕ ಇತಿಹಾಸಕ್ಕೆ ವಿಶಿಷ್ಟ ಕೊಡುಗೆ ನೀಡುವ ನಿಟ್ಟಿನಲ್ಲಿ ಸಂಶೋಧಕರು ಆಲೋಚಿಸಬೇಕಿದೆ ಎಂದರು.
ಇಡೀ ಜಗತ್ತೆ ಬೇರಗಾಗುವ ರೀತಿಯಲ್ಲಿ ಸಾಮ್ರಾಜ್ಯ ಕಟ್ಟಿದ ಹಕ್ಕ-ಬುಕ್ಕರನ್ನು ನೆನೆಯುವ ಮತ್ತು ವಿಜಯನಗರ ಸಾಮ್ರಾಜ್ಯ ಸಂಸ್ಥಾಪನಾ ದಿನಾಚರಣೆ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ಗಲಗ ರಾಜಮನೆತನದ ವಂಶಸ್ಥರಾದ ಬಸವರಾಜ ನಾಯಕ ಮಾತನಾಡಿ, ವರ್ಷದಿಂದ ವರ್ಷಕ್ಕೆ ವಿಜಯನಗರ ಸಾಮ್ರಾಜ್ಯ ಸಂಸ್ಥಾಪನಾ ದಿನಾಚರಣೆ ವಿಜೃಂಭಣೆಯಿಂದ ಆಚರಿಸುವಂತಾಗಲಿ ಎಂದು ಶುಭಕೋರಿದರು.
ಈ ವೇಳೆ ಲೇಖಕ ಅಶೋಕ ದಿದ್ದೀಗಿ, ತಾಪಂ ಮಾಜಿ ಸೇತುನಾಯಕ ಸೇರಿದಂತೆ ವಿದ್ಯಾರ್ಥಿಗಳು, ಯುವಕರು, ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…