ಬಿಸಿ ಬಿಸಿ ಸುದ್ದಿ

ಹಿಂದೂಸ್ತಾನಿ ಸಂಗೀತೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಕನ್ನಡ ಭವನದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ವಚನ ಸಂಜೀವಿನಿ ಸಾಹಿತ್ಯ ಸಾಂಸ್ಕೃತಿಕ ಕಲಾ ಸಂಸ್ಥೆ ಹಾಗೂ ಡಾ.ಶರಣಕುಮಾರ ಮೋದಿ ಫೌಂಡೇಶನ್ ಆಶ್ರಯದಲ್ಲಿ ಹಿಂದೂಸ್ತಾನಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಶ್ರೀಶೈಲ ಸುಲಫಲ ಮಠದ ಶ್ರೀ ಜಗದ್ಗುರು ಡಾ.ಸಾರಂಗ ದೇಶಿಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸಿ ಮಾತನಾಡಿ, ಒತ್ತಡದಿಂದ ಮುಕ್ತ ಆಗಬೇಕಾದರೆ ಸಂಗೀತ ಅವಶ್ಯ, ಸಂಗೀತ ಬೆಳೆಸುವ ಆಸಕ್ತಿ ಬೆಳೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: ಪಿಎಸ್ಐ ಅಕ್ರಮ ನೇಮಕಾತಿ: ಗೃಹ ಸಚಿವರ ರಾಜೀನಾಮೆಗೆ ಆಗ್ರಹ

ಸಂಗೀತ ಕಲಾವಿದರಿಗೆ ನಿರಂತರ ವೇದಿಕೆ ಕಲ್ಪಿಸುವಂತಾಗಬೇಕು. ಹಾಗಾದಾಗ ಕಲೆಯನ್ನು, ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಹೇಳಿದರು. ಆಕಾಶವಾಣಿ ನಿಲಯದ ಕಲಾವಿದರಾದ ಉಸ್ತಾದ್ ರಫೀಕ್ ಖಾನ್, ಉಸ್ತಾದ್ ಶಫೀಕ್‌ಖಾನ್‌ರಿಂದ ಜುಗಲ್‌ಬಂದಿ ಸಿತಾರವಾದನ ನಡೆಯಿತು. ಆಕಾಶವಾಣಿ ಕಲಾವಿದರಾದ ಪಂ.ಸಾತಲಿಂಗಪ್ಪ ದೇಸಾಯಿ ಕಲ್ಲೂರ ತಬಲಾ ವಾದನ ನಡೆಯಿತು.

ಮಾಜಿ ಮೇಯರ್ ಡಾ.ಶರಣಕುಮಾರ ಮೋದಿ, ಕೆಎಂಎಫ್ ಅಧ್ಯಕ್ಷ ಆರ್. ಕೆ.ಪಾಟೀಲ್, ಪತ್ರಕರ್ತರಾದ ವಾದಿರಾಜ ವ್ಯಾಸಮುದ್ರ, ಬಾಬುರಾವ್ ಯಡ್ರಾಮಿ, ಕನ್ನಡ ಮತ್ತು ಸಾಮಸ್ಮೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಕಸಾಪ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಡಾ. ಸಂಜುಪಾಟೀಲ್, ಶಂಕರ ಹೂಗಾರ ದೇಸಾಯಿ ಕಲ್ಲೂರ ಇತರರಿದ್ದರು. ವೀರೇಶ ಹೂಗಾರ ಸ್ವಾಗತಿಸಿದರು.

ಇದನ್ನೂ ಓದಿ: ಹಕ್ಕ-ಬುಕ್ಕ, ಇತರೆ ಮಹಾರಾಜರಗಳ ಬಗ್ಗೆ ಹೆಚ್ಚು ಸಂಶೋಧನೆ ನಡೆಯಲಿ: ಪ್ರಕಾಶ ದೊರೆ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago