ಬಿಸಿ ಬಿಸಿ ಸುದ್ದಿ

ವಕೀಲರ ಸಂಘದ ಚುನಾವಣೆ ನಡೆಸಲು ಆಗ್ರಹ

ಶಹಾಪುರ: ತಾಲ್ಲೂಕು ವಕೀಲರ ಸಂಘದ ಆಡಳಿತ ಅವಧಿ ಮಾರ್ಚ್ 31 ಕ್ಕೆ ಮುಗಿದಿದೆ. ಪ್ರಸಕ್ತ 2022-23 ರ ಸಂಘದ ಆಡಳಿತ ಮಂಡಳಿ ಆಯ್ಕೆ ಅಂಗವಾಗಿ ಚುನಾವಣೆಗೆ ಸಿದ್ಧಗೊಳಿಸುವಂತೆ ಲಿಖಿತ ಮತ್ತು ಮೌಖಿಕವಾಗಿ ತಿಳಿಸಿದರೂ ಸಂಘದ ಅಧ್ಯಕ್ಷರು ಯಾವುದಕ್ಕೂ ಉತ್ತರ ನೀಡದೆ ನಿರ್ಲಕ್ಷವಹಿಸುತ್ತಿದ್ದಾರೆ ಎಂದು ಹಿರಿಯ ವಕೀಲ ಯೂಸೂಬ್ ಸಿದ್ಧಿಕಿ ಆರೋಪಿಸಿದರು.

ನಗರದ ವಕೀಲರ ಭವನದಲ್ಲಿ  ಮಂಗಳವಾರ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೊದಲಿನಿಂದಲೂ ಇಲ್ಲಿನ ವಕೀಲರ ಸಂಘ ಪ್ರತಿ ವರ್ಷಕ್ಕೆ ಒಮ್ಮೆ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಸುತ್ತಾ ಬರಲಾಗಿದೆ. ಪ್ರಸಕ್ತ ವರ್ಷ ಈ ಸಮಯದಲ್ಲಿ ಚುನಾವಣೆ ನಡೆಸಬೇಕಿತ್ತು. ಆದರೆ ಪ್ರಸ್ತುತ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಚುನಾವಣೆ ನಡೆಸಲು ಸಿದ್ಧರಿರುವದಿಲ್ಲ. ಸದಸ್ಯರು ನೀಡಿದ ಯಾವುದೆ ನೋಟಿಸ್ಗೆ ಉತ್ತರ ನೀಡುತ್ತಿಲ್ಲ. ಸರ್ವಾಧಿಕಾರಿ ಧೋರಣೆ ತೋರುತ್ತಿರುವದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ: 43 ಲಕ್ಷ ವಸ್ತು ಹಾನಿ

ಇಲ್ಲಿನ ವಕೀಲರ ಸರ್ವ ಸದಸ್ಯರ ಸಭೆಯಲ್ಲಿ ಮೊದಲಿನ ನಿರ್ಣಯಕೈಗೊಂಡಂತೆ ಪ್ರತಿ ವರ್ವಕ್ಕೆ ಒಮ್ಮೆ  ಚುನಾವಣೆ ನಡೆಯಬೇಕು. ಇಲ್ಲವಾದಲ್ಲಿ ಇದೇ ಏ.22 ರಂದು ಹಿರಿಯ ನ್ಯಾಯವಾದಿಗಳ ಸಮ್ಮುಖದಲ್ಲಿ ಸಭೆ ಕರೆದು ಅಡಳಿತ ಮಂಡಳಿಯ ವಿರುದ್ಧ ಅವಿಶ್ವಾಸ ಮಂಡನೆ ಕುರಿತು ಚರ್ಚಿಸಲಾಗುವದು. ಹಿರಿಯರ ಸಲಹೆಯಂತೆ ಮುಂದಿನ ನಿರ್ಧಾರಕೈಗೊಳ್ಳಲಾಗುವದು ಎಂದು ಅವರು ಎಚ್ಚರಿಸಿದರು.

ವಕೀಲ ಸಂತೋಷ ದೇಶಮುಖ ಮಾತನಾಡಿ, ಸಂಘದಲ್ಲಿ 158 ಸದಸ್ಯರಿದ್ದು ಅದರಲ್ಲಿ   67 ಕ್ಕೂ ಹೆಚ್ಚು ಸದಸ್ಯರು ಸಹಿ ಮಾಡಿದ ಪತ್ರವನ್ನು ಸಿದ್ಧಪಡಿಸಿ  ಏ.22 ರಂದು ಕರೆದ ಹಿರಿಯರ ಸಭೆಯಲ್ಲಿ ಭಾಗವಹಿಸಿ ಚುನಾವಣೆ ನಡೆಸುವ ಕುರಿತು ಮತ್ತು ಅವಿಶ್ವಾಸ ಮಂಡನೆ ಬಗ್ಗೆ ಚರ್ಚಿಸಲು ಆಸಕ್ತವಹಿಸಿದ್ದಾರೆ ಎಂದರು. ವಕೀಲ ಮಲ್ಲಿಕಾಜರ್ುನ ಬಕ್ಕಲ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago