ಪಿಎಸ್‍ಐ ಅಕ್ರಮ ತನಿಖೆಗೆ ಶರಣಪ್ರಕಾಸ ಒತ್ತಾಯ

0
41

ಕಲಬುರಗಿ: ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣ ಬಿಜೆಪಿ ಕಾರ್ಯಕರ್ತರಿಗೆ ಹಣ ಗಳಿಸಿಕೊಳ್ಳಲು ಸರ್ಕಾರವೇ ಹೇಳಿಕೊಟ್ಟಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‍ಐ ನೇಮಕಾತಿ ಹಗಣರವನ್ನು ಬಿಜೆಪಿ ಸರ್ಕಾರ ಮುಚ್ಚಿಹಾಕುವ ಯತ್ನ ಮಾಡುತ್ತಿದ್ದು, ಈ ಪ್ರಕರಣವನ್ನು ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ಅವರ ಮೂಲಕ ಸೂಕ್ತ ತನಿಖೆ ನಡೆಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಇದನ್ನೂ ಓದಿ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ: 43 ಲಕ್ಷ ವಸ್ತು ಹಾನಿ
ಪ್ರಖರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆಯಾಗಿದ್ದರು. ಸದ್ಯ ದಿಶಾ ಸಮಿತಿ ಸದಸ್ಯರಾಗಿರುವುದರ ಜೊತೆಗೆ ಕರ್ನಾಟಕ ನಸಿರ್ಂಗ್ ಕೌನ್ಸಿಲ್ ಸದಸ್ಯರಿದ್ದಾರೆ. ಇಷ್ಟಿದ್ದರೂ ಸಹ ಹಗರಣ ಹೊರಬರುತ್ತಿದ್ದಂತೆ ದಿವ್ಯಾಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಬಿಜೆಪಿಯ ನಾಯಕರು ಹೇಳುತ್ತಿರುವುದು ನಾಚಿಕೆಗೆಡಿನ ಸಮಗತಿಯಾಗಿದೆ ಎಂದರು. ಅಂತಿದ್ದಾರೆ.

ದಿವ್ಯಾ ಅವರಿಗೆ ಸೇರಿದ ಜ್ಞಾನಜ್ಯೋತಿ ಶಾಲೆಯ ಪರೀಕ್ಷಾ ಕೇಂದ್ರದ ಎಲ್ಲಾ ಅಭ್ಯರ್ಥಿಗಳ ಓಎಮ್‍ಆರ್ ಶೀಟ್ ತಪಾಸಣೆ ಮಾಡಬೇಕು. ಈ ಶಾಲೆಗೆ ಯಾವ ಮಾನದಂಡದ ಮೇಲೆ ಯಾರ ಒತ್ತಡದ ಮೇಲೆ ಪಿಎಸ್‍ಐ ಪರೀಕ್ಷಾ ಕೇಂದ್ರ ನೀಡಲಾಗಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ: 43 ಲಕ್ಷ ವಸ್ತು ಹಾನಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here