ಜ್ಞಾನ ಜ್ಯೋತಿ ಶಾಲೆ ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಪರವಾನಿಗೆ ರದ್ದು ಮಾಡಬೇಕು: ಲಿಂಗರಾಜ ಸಿರಗಾಪೂರ

0
24
  • ಎಸ್ಐ ನೇಮಕಾತಿಯಲ್ಲಿ ಅಕ್ರಮ: ಕಠಿಣ ಶಿಕ್ಷೆಗೆ ಕನ್ನಡ ಭೂಮಿ ಆಗ್ರಹ

ಕಲಬುರಗಿ: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ನಡೆದಿದ್ದು ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ರಾಜಾರೋಷವಾಗಿ ಕೊಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ.ನಗರದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಐ ಪರೀಕ್ಷೆ ವೇಳೆ ನಡೆದಿದೆ ಎನ್ನಲಾದ ಅಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲೆಯ ಟೀಚರುಗಳು ಹಾಗೂ ಪ್ರಮುಖವಾಗಿ ಆಡಳಿತ ಮಂಡಳಿಯವರು ಸೇರಿದ್ದಾರೆ.

Contact Your\'s Advertisement; 9902492681

ಇದನ್ನೂ ಓದಿ: ಶಹಾಬಾದನಲ್ಲಿ ಜಿಲ್ಲಾ ಸಮ್ಮೇಳನ ಮಾಡಲು ಸಹಕಾರ ನೀಡಲು ಸಿದ್ಧ-ಮತ್ತಿಮಡು

ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ಮಾನ ಹರಾಜು ಹಾಕಿದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8 ಜನರನ್ನು ಸಿಐಡಿ ತಂಡ ಬಂಧಿಸಿದ್ದಾರೆ.ಆದರೆ ಪ್ರಮುಖ ಆರೋಪಿಯಾಗಿರುವ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರನ್ನು ಇನ್ನುವರೆಗೆ ಬಂಧಿಸಿಲ್ಲದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇಷ್ಟೆ ಅಲ್ಲದೆ ಈ ಪ್ರಕರಣದಲ್ಲಿ ಶಾಸಕರು,ಸಚಿವರು ಶಾಮಿಲಾಗಿದ್ದಾರೆ ಎಂದು ಅನುಮಾನಿಸಲಾಗಿದೆ.ಇದನ್ನು ತನಿಖೆ ಮಾಡಬೇಕು. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಡಕ್ಕೆ ಮಣಿಯದೆ ಸೂಕ್ತ ತನಿಖೆ ನಡೆಸುತ್ತಿರುವ ಸಿಐಡಿಗೆ ಸಂಪೂರ್ಣ ಸಹಕಾರ ಕೊಟ್ಟು ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆ ನೀಡಬೇಕು.ಈ ಪ್ರಕರಣ ಯಾವುದೇ ಕಾರಣಕ್ಕೂ ಮುಚ್ಚಿ ಹಾಕಲು ಅವಕಾಶ ನೀಡಬಾರದು ಹಾಗೂ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಇಬ್ಬರು ಬೈಕ್ ಕಳ್ಳರ ಬಂಧನ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here