ಕಲಬುರಗಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದು, ಪ್ರತಿ ಎಕರೆ ತೊಗರಿಗೆ ಕನಿಷ್ಟ 20 ಸಾವಿರ ರೂ. ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಂದ್ರಪ್ಪ ಆರ್. ಥಂಬೆ ಅವರು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮಠಗಳು ರಾಜಕೀಯ ಪಕ್ಷಗಳ ಚಟುವಟಿಕೆ ತಾಣಗಳಾಗದಿರಲಿ: ಪ್ರೊ. ಶಿವರಾಜ್ ಪಾಟೀಲ್ ಕಳವಳ
ಮುಂಬರುವ ಬೆಂಬಲ ಬೆಲೆ ನಿಗದಿ ಪಡಿಸುವಲ್ಲಿ ಕೇಂದ್ರ ಸರ್ಕಾರವು ತೊಗರಿಗೆ 9500, ಸೋಯಾಬಿನ್ ಗೆ 8500, ಕಡಲೆ ಬೆಳೆಗೆ 8000, ರೂ. ಮತ್ತು ಬಿಳಿಜೋಳಗೆ 4500 ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು. ಅಲ್ಲದೆ ಸೋಯಾ, ಕಡಲೆ,ಜೋಳ, ಕಬ್ಬು, ಗೋಧಿ ಬೆಳೆಗಳಿಗೂ ಪರಿಹಾರ ಘೋಷಿಸಬೇಕು.
ಇದನ್ನೂ ಓದಿ: ಸಿಲಿಕಾನ್ ಸಿಟಿ ಬಿಜೆಪಿ ಆಡಳಿತದಲ್ಲಿ ಕಮೀಷನ್ ಸಿಟಿಯಾಗಿದೆ: ಡಾ. ಅಜಯ್ ಸಿಂಗ್ ಲೇವಡಿ
ರೈತರು ಸಾಲ ಶೂಲ ಮಾಡಿ ಬೆಳೆ ಬೆಳೆದರೂ ಕೈಗೆ ಬರಲಿಲ್ಲ. ಇದರಿಂದ ರೈತ ತನ್ನ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ.ಅಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಬೀರಿದ್ದು, ಕೂಡಲೇ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಪ್ರಮುಖರಾದ ರಮೇಶ್ ರಾಗಿ , ಮಂಜುಳಾ ಭಜಂತ್ರಿ, ಸುನೀಲ್ ಮಠಪತಿ, ವಿಜಯ ಕುಮಾರ ಹತ್ತರಕಿ, ಉಮಾಪತಿ ಪಾಟೀಲ್, ಬೀರಣ್ಣ ಪೂಜಾರಿ, ದಸ್ತಗಿರಸಾಬ, ಶರಣಯ್ಯಸ್ವಾಮಿ, ಶ್ರೀ ಶೈಲ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಸರಕಾರದ ಮಹಿಳಾ ಕೇಂದ್ರಿತ ನೀತಿಗಳಿಗೆ ಡಾ ಅಂಬೇಡ್ಕರ್ ಕಾರಣ : ಬಡಿಗೇರ್
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…