ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಜಿಲ್ಲಾ ಪ್ರವಾಸಕ್ಕೆ ಗುರುವಾರ ಕಲಬುರಗಿಗೆ ಆಗಮಿಸಿದರು.
ಬಳ್ಳಾರಿ ಜಿಂದಾಲ್ ಏರ್ ಸ್ಟ್ರಿಪ್ ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿ ಡಿ.ಎ.ಅರ್. ಗ್ರೌಂಡ್ ಗೆ ಅಗಮಿಸಿದ ಮುಖ್ಯಮಂತ್ರಿಗಳನ್ನು ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಕೆ.ಕೆ.ಅರ್.ಡಿ.ಬಿ. ಕಾರ್ಯದರ್ಶಿ ಆರ್.ವೆಂಕಟೇಶ ಕುಮಾರ, ಐ.ಜಿ.ಪಿ. ಮನೀಷ್ ಖರ್ಬಿಕರ್,
ಡಿ.ಸಿ. ಯಶವಂತ ವಿ. ಗುರುಕರ್, ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಎಸ್.ಪಿ. ಇಶಾ ಪಂತ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಸಾಸಿ ಅವರುಗಳು ಹೂಗುಚ್ಚ ನೀಡಿ ಬರಮಾಡಿಕೊಂಡರು.
ಇದನ್ನೂ ಓದಿ: ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ
ಈ ಸಂದರ್ಭದಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ, ಪರಿಶಿಷ್ಟ ಪಂಗಡ ಕಲ್ಯಾಣ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ವಿಧಾನ ಪರಿಷತ್ತಿನ ಶಾಸಕರಾದ ಶಶೀಲ ಜಿ. ನಮೋಶಿ, ಸುನೀಲ ವಲ್ಯಾಪೂರೆ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರ ವಣಿಕ್ಯಾಳ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಎ.ಸಿ.ಪಿ ದೀಪನ್ ಎಂ.ಎನ್,ಮತ್ತಿತರರು ಇದ್ದರು.
ಇದನ್ನೂ ಓದಿ: ಅಲ್ಪಸಂಖ್ಯಾತರ ಇಲಾಖೆಗೆ 10 ಸಾವಿರ ಕೋಟಿ ಮೀಸಲಿಡಲು CMಗೆ ನಯ ಸವೇರದಿಂದ ಮನವಿ