ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ

0
43

ಕಲಬುರಗಿ: ನಾಡಿನಾದ್ಯಂತ‌ ತೀವ್ರ ಸಂಚಲನ ಮೂಡಿಸಿರುವ ಪಿ.ಎಸ್.ಐ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರನ್ನು‌ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.‌ ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

ಎರಡು ದಿನಗಳ ಪ್ರವಾಸಕ್ಕೆ ಗುರುವಾದ ಕಲಬುರಗಿಗೆ ಆಗಮಿಸಿದ ಅವರು ನಗರದ ಡಿ.ಎ.ಆರ್. ಪರೇಡ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Contact Your\'s Advertisement; 9902492681

ಇದನ್ನೂ ಓದಿ: ಕಲಬುರಗಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

ಅಕ್ರಮ‌ ನೇಮಕಾತಿ ಬಗ್ಗೆ ಪ್ರಾಥಮಿಕ ತನಿಖೆಯಿಂದ‌ ಮಾಹಿತಿ ಬಂದ ಕೂಡಲೇ ನಮ್ಮ ಸರ್ಕಾರ ಹೆಚ್ಚಿನ ತನಿಖೆಗಾಗಿ ಸಿ.ಐ.ಡಿ.ಗೆ ವಹಿಸಿದೆ. ಸಿ.ಐ.ಡಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಕಲಬುರಗಿಯಲ್ಲಿ ಕೆಲವರನ್ನು ಬಂಧಿಸಿ ವಿಚಾರಣೆ‌ ಸಹ ನಡೆಸುತ್ತಿದೆ ಎಂದರು.

ಪಿ‌.ಎಸ್.ಐ ನೇಮಕಾತಿ ಮರು ಪರೀಕ್ಷೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿ.ಎಂ., ಈ ಕುರಿತಂತೆ ತನಿಖೆಯ ಮಧ್ಯಂತರ ವರದಿ ಕೇಳಲಾಗಿದೆ. ವರದಿ ಬಂದ ನಂತರ‌‌ ನಿರ್ಧರಿಸಲಾಗುವುದು ಎಂದರು.

ಇದನ್ನೂ ಓದಿ: ಮಠಗಳು ರಾಜಕೀಯ ಪಕ್ಷಗಳ ಚಟುವಟಿಕೆ ತಾಣಗಳಾಗದಿರಲಿ: ಪ್ರೊ. ಶಿವರಾಜ್ ಪಾಟೀಲ್ ಕಳವಳ

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಶಾಸಕರಾದ‌ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕರಾದ ಶಶಿಲ್ ಜಿ. ನಮೋಶಿ, ಸುನೀಲ್ ವಲ್ಯಾಪೂರೆ,‌ ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಮಾಜಿ ಶಾಸಕ‌ ದೊಡ್ಡಪ್ಪಗೌಡ ಪಾಟೀಲ‌ ನರಿಬೋಳ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here