ಕಲಬುರಗಿ: ರಾಜ್ಯದಲ್ಲಿ ಸಂಚಲ ಮೂಡಿಸಿರುವ ಪಿಎಸ್ಐ ನೇಮಕಾತಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಗನ್ ಮ್ಯಾನ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಯ್ಯಣ್ಣ ದೇಸಾಯಿ ಬಂಧಿತ ಶಾಸಕರ ಗನ್ ಮ್ಯಾನ್. ಅಯ್ಯಣ್ಣ ಸಹ ಪಿಎಸ್ಐ ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅವರ ಹೆಸರು ಇರುವ ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಅವರನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ:ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ
ಕಳೇದವ ಒಂದು ವಾರದಿಂದ ತಲೆಮರೆಸಿಕೊಂಡ ಪ್ರಕರಣದ ಕಿಂಗ್ ಪಿನ್ ದಿವ್ಯ ಹಾಗರಗಿ ನಿರೀಕ್ಷಣಾ ಜಮೀನು ಅರ್ಜಿ ಸಲ್ಲಿಸಿದ್ದಾರೆ. ಅವರ ಬಂಧನಕ್ಕೆ ಆಗ್ರಹಿಸಿ ಜಿಲ್ಲೆಯಲ್ಲಿ ಹೋರಾಟ ಮುಂದುವರೆದಿದೆ.
ಪಿಎಸ್ಐ ಪರೀಕ್ಷೆ ಬರೆದ 50 ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದು, ಎಂಟು ಜನರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಇದನ್ನೂ ಓದಿ: ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ