ಲಖನೌ: ಕಳ್ಳನೆಂದು ಶಂಕಿಸಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರ ಘಟನೆ ಬರಬಂಕಿ ಜಿಲ್ಲೆಯ ರಘೋಪುರ್ ಗ್ರಾಮದಲ್ಲಿ ನಡೆದಿದೆ.
ಸುಜಿತ್ ಕುಮಾರ (28) ಮೃತ ಯುವಕ, ಸುಜಿತ್ ಕುಮಾರ 19 ರಂದು ತನ್ನ ಅತ್ತೆ ಮನೆಯಿಂದ ತನ್ನ ಪತ್ನಿಯನ್ನು ಕರೆದು ತರಲು ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿದ್ದ ಕಾರಣ ನಾಯಿಗಳಿಂದ ತಪ್ಪಿಸಿಕೊಳ್ಳು ಮನೆಯೊಂದರಲ್ಲಿ ನುಗ್ಗಿದ್ದಾಗ ಈ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ.
ಮನೆಯವರು ಸುಜಿತ್ ನನ್ನು ಕಳ್ಳ ಎಂದು ಶಂಕಿಸಿ ಮರಣಾಂತಿಕ ಹಲ್ಲೆ ನಡೆಸಿದಲ್ಲದೆ ಪ್ರೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಎನ್ನಲಾಗಿದ್ದು, ಬೆಂಕಿಯಿಂದ ಸುಜಿತ್ 40% ದೇಹ ಸುಟ್ಟು ಹೋಗಿತ್ತು,
ಸುಜಿತ್ ನನ್ನು ಲಖನೌದ ಶ್ಯಾಮ್ ಪ್ರಸಾದ್ ಮುಖರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.
ಘಟನೆಯಲ್ಲಿ ಯುವಕನ ದೇಹ ಸಂಪೂರ್ಣವಾಗಿ ಸುಟ್ಟು ಹೋಗಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ, ದೇಹದ ಇತರೆ ಭಾಗಗಳಿಗೂ ಸೋಂಕು ತಗಲಿ ಮೃತಪಟ್ಟಿದ್ದಾನೆಂದು ಆಸ್ಪತ್ರೆಯ ವೈದ್ಯಕೀಯ ಅಧಿಕಾರಿಗಳು ಅಶುತೋಶ್ ದುಬೆ ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಸ್ಥಳೀಯ ಪೊಲೀಸರು 4 ಮಂದಿ ಆರೋಪಿಗಳು ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದ್ದು ಶ್ರವಣ್ ಮತ್ತು ಉಮೇಶ್ ಯಾದವ್ ಎಂಬ ಇಬ್ಬರು ಆರೋಪಿಗಳು ಪೊಲೀಸರು ಬಂಧೀಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…