ಕಲಬುರಗಿ: ಶ್ರೀರಾಮಸೇನೆ ಆಳಂದನಲ್ಲಿ ಹಮ್ಮಿಕೊಂಡಿರುವ ಶೋಭಾಯಾತ್ರೆಗೆ ಅನುಮತಿ ರದ್ದು ಪಡಿಸಿ ಮತ್ತು ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಆಕ್ರಮ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಗುರುವಾರ ಭಾರತ ಕಮ್ಯುನಿಷ್ಟ್ ಪಕ್ಷ (ಎಂ) ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಾಟನಾ ಮೆರವಣಿಗೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯಾದರ್ಶಿಯಾಗಿರುವ ಕೆ ನೀಲಾ ಮಾತನಾಡಿ, ಸಾಮರಸ್ಯದ ತಾಣವಾಗಿರುವ ಆಳಂದ ಲಾಡ್ಲೆ ಮಶಾಕ್ ದರ್ಗಾ ಕೋಮುವಾದಿಗಳು ಮಾರ್ಚ್ ನಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದರು. ಇದಕ್ಕೆ ಬಿಜೆಪಿ ಸಂಸದರು, ಶಾಸಕರು ಸಾಥನ್ ನೀಡಿರುವುದು ಮೇಲ್ನೊಟಕ್ಕೆ ಕಂಡು ಬಂದಿದೆ. ಇದರ ನಡುವೆ ಇದೇ 24 ರಂದು ಶ್ರೀರಾಮಸೇನೆ ಆಳಂದನಲ್ಲಿ ಶೋಭಾಯಾತ್ರೆ ಹಮ್ಮಿಕೊಂಡಿದ್ದು, ಇದಕ್ಕೆ ಅನುಮತಿ ನಿರಾಕರಿಸಬೇಕೆಂದು ಕಲಬುರಗಿ ಎಸ್.ಪಿ ಕಚೇರಿ ಮುಂದೆ ಪ್ರತಿಭಟನೆ ಆಗ್ರಹಿಸಿದರು.
ಇದನ್ನೂ ಓದಿ: ಕಲಬುರಗಿಯಲ್ಲಿ ಸಿಎಂ ವಾಹನಕ್ಕೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಾಕರ್ತರ ಬಂಧನ
ನಗರದ ತೀಮ್ಮಾಪುರ ವೃತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಕಲಬುರಗಿ ಎಸ್.ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಆಕ್ರಮದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಅವರನ್ನು ಕೂಡಲೇ ಬಂಧಿಸಿ, ರಾಜ್ಯದಲ್ಲಿ ಇಂತಹ ಕೃತ್ಯಕ್ಕೆ ಸಾಥ್ ನೀಡುತ್ತಿರುವ ಗೃಹ ಸಚಿವರು ಕೂಡಲೇ ರಾಜೀನಾಮ ನೀಡಬೇಕೆಂದು ಕೆ ನೀಲಾ ಆಗ್ರಹಿಸಿದರು.
ಪಿಎಸ್ಐ ಆಕ್ರಮದಲ್ಲಿ ನೊಂದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆಗೆ ಸರಕಾರ ಅವಕಾಶ ನೀಡಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಈ ಸಂಧರ್ಬದಲ್ಲಿ ಜಗದೇವಿ ನೂಲಕರ್, ಮೇಘರಾಜ್ ಕಠಾರೆ, ಎಂಬಿ ಸಜ್ಜನ್, ಭೀಮಶೆಟ್ಟಿ ಯಂಪಳ್ಳಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ: ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…