ಬೆಂಗಳೂರು: ಪತ್ರಕರ್ತ ವೃತ್ತಿ ಜವಾಬ್ದಾರಿಯುತವಾದದ್ದು. ಪತ್ರಕರ್ತರು ರಾಜಕಾರಣಿಗಳಿಗೂ ಬುದ್ದಿ ಹೇಳುವಂತಹ ನೈತಿಕತೆಯನ್ನು ಉಳಿಸಿಕೊಳ್ಳುವ ಮೂಲಕ ವೃತ್ತಿ ಘನತೆ ಕಾಪಾಡಿಕೊಳ್ಳಲು ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿ ಅವರು ಕರೆ ನೀಡಿದರು.
ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ನೂತನ ಪದಾಧಿಕಾರಿಗಳ ಪದಗ್ರಹ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಪತ್ರಕರ್ತರು ಸಮಾಜದ ಒಳಿತಿಗೆ ಕೈಗೊಂಡ ಪ್ರತಿಜ್ಞೆಯಂತೆ ದುಡಿಯಬೇಕು ಎಂದರು.
ಇದನ್ನೂ ಓದಿ: ಪ್ರತಿಪಕ್ಷ ನಾಯಕನನ್ನು ಮತ್ತೆ ಕುಟುಕಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ: ಹೆಚ್‌ಡಿಕೆ ಹೇಳಿದ್ದೇನು?
ಸಮಾಜದ ಆಗು ಹೋಗುಗಳಿಗೆ ಸದಾ ಪ್ರತಿಸ್ಪಂದಿಸುವ ಪತ್ರಕರ್ತರು ಉತ್ತಮ ಸಮಾಜ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದರು.
ತಮ್ಮ ವಿಧಾನಪರಿಷತ್ ನಿಧಿಯಿಂದು ಒಂದೂವರೆ ಕೋ.ರೂ ಹೆಚ್ಚಿ ನ ನೆರವನ್ನು ಪತ್ರಕರ್ತ ಭವನಗಳಿಗೆ ನೀಡಿದ್ದೇನೆ. ರಾಜ್ಯಾದ್ಯಾಂತ ತಾಲ್ಲೂಕು ಮಟ್ಟದಲ್ಲೂ ಪತ್ರಕರ್ತರ ಭವನಗಳ ನಿರ್ಮಾಣಕ್ಕೆ ಗರಿಷ್ಠ 10 ಲಕ್ಷ ರೂ. ಗಳನ್ನು ನೀಡಲು ಸಿದ್ದನಿದ್ದೇನೆ . ಕಾರ್ಯನಿರತ ಪತ್ರಕರ್ತರ ಸಂಘವು ಸೂಚಿಸುವ ಜಿಲ್ಲೆಗಳಲ್ಲೂ ತಮ್ಮ ತಾಯಿಯ ಹೆಸರಿನಲ್ಲಿರುವ ಟ್ರಸ್ಟ್ ಮೂಲಕ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ನಿಧಿ ಸ್ಥಾಪಿಸಲು ತಾವು ಸಿದ್ದರಿರುವುದಾಗಿ ಘೋಷಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳು ಕ್ರೀಯಾಶೀಲವಾಗಿವೆ ಎಂದು ಶ್ಲಾಘಿಸಿದರು.
ಇದನ್ನೂ ಓದಿ:ಶೋಭಯಾತ್ರೆಗೆ ಅನುಮತಿ ನೀಡದಂತೆ ಸಿಪಿಐಎಂ ಪ್ರತಿಭಟನೆ
ಮುಖ್ಯ ಅತಿಥಿಗಳಾಗಿ ಹಿರಿಯ ನಿವೃತ್ತ ಪತ್ರಕರ್ತ ಪಿ.ರಾಮಯ್ಯ ಅವರು ಮಾತನಾಡಿ, ವೃತ್ತಿ ಬದ್ಧತೆ ಉಳಿಸಿಕೊಳ್ಳುವುದು ಇಂದಿನ ಕಾಲಘಟ್ಟದಲ್ಲಿ ಸವಾಲಾಗಿದೆ. ಆಸೆ, ಆಮೀಷಗಳಿಗೆ ಬಲಿಯಾಗದೆ ವೃತ್ತಿ ಘನತೆ ಕಾಪಾಡಿ ಎಂದರು.
ನಲವತ್ತೊಂಬತ್ತು ವರ್ಷದ ಪತ್ರಿಕೋದ್ಯಮದ ತಮ್ಮ ನೆನಪುಗಳನ್ನು ಮೆಲುಕು ಹಾಕಿದರು.ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಮಾತನಾಡಿ, ವಾರ್ತಾ ಇಲಾಖೆ ಮತ್ತು ಕೆಯುಡಬ್ಲ್ಯೂಜೆ ಬಾಂಧವ್ಯದ ಕೊಂಡಿ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ಕೆಯುಡಬ್ಲ್ಯೂಜೆ ನಮಗೆ ಸದಾ ಸಹಕಾರ ನೀಡುತ್ತಾ ಮಾದರಿ ಸಂಘಟನೆಯಾಗಿ ಬೆಳೆದಿದೆ ಎಂದರು.
ಇದನ್ನೂ ಓದಿ: ವಿಕಲಚೇತನರಿಗೆ ತ್ರಿಚಕ್ರ ವಾಹನ (ಸ್ಕೂಟರ್) ವಿತರಣೆ: ಅರ್ಜಿ ಆಹ್ವಾನ
ಅಧ್ಯಕ್ಷತೆ ವಹಿಸಿದ್ದ ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಚುನಾವಣೆ ಸವಾಲು ಎದುರಿಸುವ ಮೂಲಕ ದೇಶದಲ್ಲಿ ಒಂದು ಮಾದರಿಯ ವೃತ್ತಿಪರ ಸಂಘಟನೆಯಾಗಿ ಹೆಮ್ಮರವಾಗಿ ಬೆಳೆದಿದೆ ಎಂದರು.
ಸಂಘವು ರಾಜ್ಯ ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿಗೆ ಅವಿರತವಾಗಿ ಶ್ರಮಿಸಲಿದೆ ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ರಮೇಶ್ ಅಜ್ಜಮಾಡ ಕುಟ್ಟಪ್ಪ, ಭವಾನಿಸಿಂಗ್, ಪುಂಡಲೀಕ್ ಬಾಳೋಜಿ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮ, ಸೋಮಶೇಖರ ಕೆರಗೋಡು, ನಿಂಗಪ್ಪಚಾವಡಿ ಉಪಸ್ಥಿತರಿದ್ದರು.
ಇದನ್ನೂ ಓದಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪದಾಧಿಕಾರಿಗಳ ನೇಮಕ
ಹೊಸದಾಗಿ ಆಯ್ಕೆಯಾಗಿರುವ ಜಿಲ್ಲಾ ಸಂಘದ ಪದಾಧಿಕಾರಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…