ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲು ನಿಗದಿ ಮಾಡಿ ಚುನಾವಣೆ ನಡೆಸಿ: ಪತ್ರೇಶ್

0
25

ಹಗರಿಬೊಮ್ಮನಹಳ್ಳಿ: ಪಟ್ಟಣದ ಸುದ್ದಿಗೋಷ್ಥಿಯಲ್ಲಿ ಮಾತನಾಡಿ, 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ ತಿಂಗಳಲ್ಲಿ ಚುನಾವಣೆ ಜರುಗಿ ಇಲ್ಲಿಗೆ ನಾಲ್ಕು ತಿಂಗಳಾದರೂ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡಿ ತಕ್ಷಣವೇ ಚುನಾವಣೆ ನಡೆಸದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ತಕ್ಷಣವೇ ಮೀಸಲು ನಿಗದಿಗೊಳಿಸಿ ಚುನಾವಣೆ ನಡೆಸಲು ಒತ್ತಾಯಿಸಿದರು.

ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ ಹೊರಟರೆ‌ ಜನರ ಶವಗಳ ಮೇಲೆ ನಡೆದುಕೊಂಡು ಹೋಗಬೇಕಾಗುತ್ತದ: ಪ್ರಿಯಾಂಕ್ ಖರ್ಗೆ

Contact Your\'s Advertisement; 9902492681

58 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಬಹುತೇಕ ಕಡೆ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿರುವುದರಿಂದ ಬಿಜೆಪಿ ಸರ್ಕಾರ ಮೀಸಲು ನಿಗದಿಗೊಳಿಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಇರುವಾಗü ಆಡಳಿತಾಧಿಕಾರಿಗಳನ್ನು ನೇಮಿಸಿ ಹಿಂಬಾಗಿಲ ಮೂಲಕ ಅಧಿಕಾರ ನಡೆಸುವ ಭಿಜೆಪಿ ಸರ್ಕಾರದ ನೀತಿ ಸಂವಿಧಾನ ವಿರೋಧಿಯಾಗಿದ್ದು ತಕ್ಷಣವೇ ಮೀಸಲು ನಿಗದಿಗೊಳಿಸಿ ಚುನಾವಣೆ ನಡೆಸಲು ಪೌರಾಡಳಿತ ಇಲಾಖೆ ಸಚಿವರು ಮತ್ತು ಪ್ರಧಾನ ಕರ‍್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ಪತ್ರೇಶ್ ತಿಳಿಸಿದರು.

ಇದನ್ನೂ ಓದಿ: ಕೆಯುಡಬ್ಲ್ಯೂಜೆ ಜಿಲ್ಲಾ, ರಾಜ್ಯ ಸಂಘದ ಪದಾರ್ಥಗಳ ಪ್ರತಿಜ್ಞಾವಿಧಿ ಸ್ವೀಕಾರ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here