ಹಗರಿಬೊಮ್ಮನಹಳ್ಳಿ: ಪಟ್ಟಣದ ಸುದ್ದಿಗೋಷ್ಥಿಯಲ್ಲಿ ಮಾತನಾಡಿ, 58 ನಗರ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ ತಿಂಗಳಲ್ಲಿ ಚುನಾವಣೆ ಜರುಗಿ ಇಲ್ಲಿಗೆ ನಾಲ್ಕು ತಿಂಗಳಾದರೂ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡಿ ತಕ್ಷಣವೇ ಚುನಾವಣೆ ನಡೆಸದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ತಕ್ಷಣವೇ ಮೀಸಲು ನಿಗದಿಗೊಳಿಸಿ ಚುನಾವಣೆ ನಡೆಸಲು ಒತ್ತಾಯಿಸಿದರು.
ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ ಹೊರಟರೆ ಜನರ ಶವಗಳ ಮೇಲೆ ನಡೆದುಕೊಂಡು ಹೋಗಬೇಕಾಗುತ್ತದ: ಪ್ರಿಯಾಂಕ್ ಖರ್ಗೆ
58 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಬಹುತೇಕ ಕಡೆ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿರುವುದರಿಂದ ಬಿಜೆಪಿ ಸರ್ಕಾರ ಮೀಸಲು ನಿಗದಿಗೊಳಿಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.
ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಇರುವಾಗü ಆಡಳಿತಾಧಿಕಾರಿಗಳನ್ನು ನೇಮಿಸಿ ಹಿಂಬಾಗಿಲ ಮೂಲಕ ಅಧಿಕಾರ ನಡೆಸುವ ಭಿಜೆಪಿ ಸರ್ಕಾರದ ನೀತಿ ಸಂವಿಧಾನ ವಿರೋಧಿಯಾಗಿದ್ದು ತಕ್ಷಣವೇ ಮೀಸಲು ನಿಗದಿಗೊಳಿಸಿ ಚುನಾವಣೆ ನಡೆಸಲು ಪೌರಾಡಳಿತ ಇಲಾಖೆ ಸಚಿವರು ಮತ್ತು ಪ್ರಧಾನ ಕರ‍್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ಪತ್ರೇಶ್ ತಿಳಿಸಿದರು.
ಇದನ್ನೂ ಓದಿ: ಕೆಯುಡಬ್ಲ್ಯೂಜೆ ಜಿಲ್ಲಾ, ರಾಜ್ಯ ಸಂಘದ ಪದಾರ್ಥಗಳ ಪ್ರತಿಜ್ಞಾವಿಧಿ ಸ್ವೀಕಾರ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…