ಬಿಸಿ ಬಿಸಿ ಸುದ್ದಿ

ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೇ ಪೊಲೀಸರಿಗೆ ತಿಳಿಸಿ: ಹಳ್ಳೂರ್

ಶಹಾಬಾದ: ಗ್ರಾಮದಲ್ಲಿರುವ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೇ ಪೊಲೀಸರಿಗೆ ಕರೆ ಮಾಡಿದರೇ, ಯಾವತ್ತಿಗೂ ಸ್ಪಂದಿಸುವ ಕೆಲಸ ಮಾಡುತ್ತದೆ ಎಂದು ನಗರ ಪೊಲೀಸ್ ಠಾಣೆಯ ಪಿಐ ಸಂತೋಷ ಹಳ್ಳೂರ್ ಹೇಳಿದರು.

ಅವರು ಗುರುವಾರ ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ದೇಶನದಂತೆ ಆಯೋಜಿಸಲಾದ ನಿಮ್ಮ ಮನೆ ಬಾಗಿಲಿಗೆ ಪೊಲೀಸ್ ಗ್ರಾಮಸಭೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಪಿ.ಎಮ್. ಕಿಸಾನ್ ಫಲಾನುಭವಿಗಳು ಕೆಸಿಸಿ ಪಡೆಯಲು ಸೂಚನೆ

ಪೊಲೀಸ್ ಇಲಾಖೆ ಸಮಾಜದಲ್ಲಿ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಯಲು ಸಾಕಷ್ಟು ಶ್ರಮಿಸುತ್ತ ಬಂದಿದೆ.ಸಮಾಜದಲ್ಲಿ ನಡೆಯುವ ಮಟ್ಕಾ, ಜೂಜಾಟ ಸೇರಿದಂತೆ ಸಮಾಜ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೇ ಇಲಾಖೆಗೆ ತಿಳಿಸಬಹುದು.ಗ್ರಾಮಗಳಲ್ಲಿ ಯಾವುದೇ ರಿತೀಯ ಕಾನೂನು ಬಾಹಿರ ಚಟುವಟಿಕೆಗಳು ಕುರಿತು ಮಾಹಿತಿ ನೀಡಿದರೆ ತಕ್ಷಣವೇ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಪೊಲೀಸರ ಬಗ್ಗೆ ಭಯ ಬೇಡ. ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವುದರೊಂದಿಗೆ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆ ಮುಕ್ತ ಗ್ರಾಮವನ್ನಾಗಿ ಮಾಡಲು ಇಲಾಖೆ ಶ್ರಮಿಸಲು ಮುಂದಾಗಿದೆ. ಸಂಕಷ್ಟದಲ್ಲಿರುವ, ನೊಂದ ಜನರಿಗೆ ಪೊಲೀಸ್ ಇಲಾಖೆ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ.ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಮುಕ್ತವಾಗಿ ಹೇಳಿಕೊಳ್ಳಬಹುದು.ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಅಹಿತಕರ ಘಟನೆಯಾಗುವ ಚಿತ್ರ ಹಾಗೂ ಬರಹಗಳನ್ನು ಹಾಕಬೇಡಿ. ಗ್ರಾಮದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೇ ಯಾವುದೇ ಅಂಜದೇ ಅಳುಕದೇ ಧೈರ್ಯದಿಂದ ತಿಳಿಸಿ.ಅದನ್ನು ನಾವು ಮಟ್ಟ ಹಾಕುತ್ತೆವೆ. ಇಲ್ಲದಿದ್ದರೇ ಕರೆ ಮಾಡಿಯಾದರೂ ತಿಳಿಸಿ.ನಿಮ್ಮ ಹೆಸರನ್ನು ಗೌಪ್ಯವಾಗಿ ಇಡುತ್ತೆವೆ.ಅಲ್ಲದೇ ಏನೆ ಸಮಸ್ಯೆ ಇದ್ದರೇ 112ಗೆ ಕರೆ ಮಾಡಿ.ಅಲ್ಲದೇ ಬೀಟ್ ಪೊಲೀಸರಿಗೆ ತಿಳಿಸಬಹುದು ಎಂದರು.

ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ ಹೊರಟರೆ‌ ಜನರ ಶವಗಳ ಮೇಲೆ ನಡೆದುಕೊಂಡು ಹೋಗಬೇಕಾಗುತ್ತದ: ಪ್ರಿಯಾಂಕ್ ಖರ್ಗೆ

ಗ್ರಾಪಂ ಅಧ್ಯಕ್ಷೆ ಸುಷ್ಮಾ ಮರಲಿಂಗ ಗಂಗಭೋ, ಗ್ರಾಪಂ ಸದಸ್ಯರಾದ ಬೆಳ್ಳಪ್ಪ ಕಣದಾಳ,ಸಿದ್ದು ಸಜ್ಜನಶೆಟ್ಟಿ, ಮುಖಂಡರಾದ ರಾಜಶೇಖರ ಮಾಲಿ ಪಾಟೀಲ,ವಿರೇಶ ಗೊಳೇದ್,ಮಹಾಲಿಂಗ ಪೂಜಾರಿ, ಶಿವರಾಯ ಮರತೂರ, ಇತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago