ಅಫಜಲಪೂರ: ತಾಲ್ಲೂಕಿನ ಗೌರ(ಕೆ) ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳಸಿದ ಆರೋಪಿಯನ್ನು ಬಂಧಿಸಿ, ಅಫಜಲಪೂರ್ ಪೊಲೀಸರು ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಪಿ.ಎಸ್.ಐ ಮಂಜುನಾಥ ಹೂಗಾರ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪ್ರಭು ಚಂದಪ್ಪ ಜಮಾದಾರ(35) ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗೌರ (ಕೆ) ಗ್ರಾಮದ ನಿವಾಸಿಯಾಗಿದ್ದ ಪ್ರಭು ಸರ್ವೆ ನಂ 54 ತನ್ನ ಜಮೀನಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಬೆಳೆ ಬೆಳೆಯುತ್ತಿದ್ದ ಬಗ್ಗೆ ಖಚಿತ ಮಾಹಿತ ಪಡೆದ ಅಫಜಾಲಪೂರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಹಾಗೂ ಬೆಲೆ ಬಾಳುವ ಗಾಂಜವನ್ನು ವಶಪಡಿಸಿಕೊಂಡಿದ್ದಾರೆ.
ಸಿಪಿಐ ಮಹಾಂತೇಶ ಪಾಟೀಲ ಶರಣಪ್ಪ ಎಚ್.ಸಿ, ಯಲಗೊಂಡ, ಶಂಕರ್ ಜೊತೆಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…