ಕಲಬುರಗಿ: ಪಿಎಸ್ ಐ ಅಕ್ರಮ ನೇಮಕಾತಿ ಹಗರಣದಲ್ಲಿ ದೊಡ್ಡ ದೊಡ್ಡ ಕುಳಗಳ ಕೈವಾಡ ಇರುವ ಶಂಕೆ ಇದ್ದು ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಲು ಗೃಹ ಸಚಿವರು ರಾಜೀನಾಮೆ ನೀಡಲಿ ಹಾಗೂ ತನಿಖೆ ಮುಗಿಯುವವರೆಗೆ ನೇಮಕಾತಿ ಎಡಿಜಿಪಿ ಅವರನ್ನು ವರ್ಗಾವಣೆ ಮಾಡುವಂತೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಕಲಬುರಗಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದ್ದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ನೇಮಕಾತಿಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆಯ ಆಡಿಯೋ ಟೇಪ್ ಬಿಡುಗಡೆ ಮಾಡಿದ ಅವರು ಸಂಭಾಷಣೆ ಉದ್ದಕ್ಕೂ ಅವರಿಬ್ಬರು ಮಾತನಾಡಿದ್ದು ನೋಡಿದರೆ ಇಡೀ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ” ಇಡೀ ಹಗರಣದಲ್ಲಿ ಯಾವುದೇ ಪಕ್ಷದವರು ಇದ್ದರೂ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಿ ನೊಂದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.
ಇದನ್ನೂ ಓದಿ: ಪಿಎಸ್ಐ ಪರೀಕ್ಷೆಯಲ್ಲಿ ಆಕ್ರಮ: 8 ಜನರ ಜಾಮೀನು ಅರ್ಜಿ ವಜಾ
545 ಪಿಎಸ್ ಐ ಹುದ್ದೆಗಳಿಗೆ ಒಟ್ಟು 1,28,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ 75,000 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಎಲ್ಲ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದ್ದು ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಶಾಸಕರು ಇಡೀ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ರಾಜೇಶ್ ಹಾಗರಗಿ ಹಾಗೂ ಇತರ 13 ಜನರನ್ನ ಆರೆಸ್ಟ್ ಮಾಡಲಾಗಿದೆ. ಆದರೆ ಬಿಜೆಪಿ ಪಕ್ಷದ ನಾಯಕಿ ದಿವ್ಯಾ ಹಾಗರಗಿ ಅವರನ್ನ ಅರೆಸ್ಟ್ ಮಾಡದಿರುವುದು ಗಮನಿಸಿದರೆ ಪ್ರಮುಖ ಕಿಂಗ್ ಪಿನ್ ಗಳು ಇನ್ನೂ ಹೊರಗಡೆ ಇದ್ದಾರೆ ಎಂದು ತಿಳಿಯುತ್ತಿದೆ ಎಂದರು.
ದಿವ್ಯಾ ಹಾಗರಗಿ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದ ಮೇಲೆ ಅವರು ಯಾರ ಜೊತೆಯಲ್ಲಾದರೂ ಸಂಪರ್ಕದಲ್ಲಿದ್ದಾರೆ ಎಂದರ್ಥವಲ್ಲವೇ? ಇದು ಅಧಿಕಾರಿಗಳಿಗೆ ಹಾಗೂ ಗುಪ್ತಚರ ಇಲಾಖೆಗೆ ತಿಳಿದಿಲ್ಲವೇ? ಇದೆಲ್ಲ ಗಮನಿಸಿದರೆ ತನಿಖಾಧಿಕಾರಿಗಳ ಮೇಲೆ ಒತ್ತಡ ಬರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದರು.
ಇಡೀ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸಬೇಕೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಕೆಲವು ಪ್ರತಿಭಾವಂತರು ಪರೀಕ್ಷೆ ಬರೆದಿದ್ದಾರೆ. ಇಂತಹ ಸಂದರ್ಭದಲ್ಲಿ ಮರು ಪರೀಕ್ಷೆ ನಡೆಸಬೇಕೇ ಎನ್ನುವುದನ್ನು ಸರ್ಕಾರ ನಿರ್ಧರಿಸಬೇಕು ಎಂದು ಹೇಳಿದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಜಲ್ ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ ಅವರನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ಪ್ರತಿಕ್ರಿಯಿಸಿ ಅವರು, ಮಹಾಂತೇಶ ಪಾಟೀಲ ಅವರು ಕಾಂಗ್ರೆಸ್ ರಾಜೀನಾಮೆ ಕೊಟ್ಟಿದ್ದಾರೆ. ಆದರೂ ಅವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ದ ಕೂಡಾ ಕಾನೂನು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…