ಶಹಾಪುರ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಂತೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ ಡಾ.ಮಲ್ಲಿಕಾರ್ಜುನ ಖರ್ಗೆ ಹೆಸರು ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅಹಿಂದ ಮುಖಂಡ ಆರ್.ಚೆನ್ನಬಸ್ಸು ವನದುರ್ಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಪಿಎಸ್ಐ ಪರೀಕ್ಷೆಯಲ್ಲಿ ಆಕ್ರಮ: 8 ಜನರ ಜಾಮೀನು ಅರ್ಜಿ ವಜಾ
ಈ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಯೋಜನೆ ಶ್ರಮಿಸಿದ್ದಾರೆ ಎನ್ನುವ ಕಾರಣವನ್ನು ಮುಂದೆ ಮಾಡಿ ಅವರ ಹೆಸರು ನಾಮಕರಣ ಮಾಡುತ್ತೇವೆ ಎನ್ನುವುದು ಸರಿಯಾದ ಕ್ರಮವಲ್ಲ. ಹಾಗಾದರೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಮುಖಂಡ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಶ್ರಮವನ್ನು ಕಲ್ಯಾಣ ಕರ್ನಾಟಕದ ಜನತೆ ಮರೆಯುವಂತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಪಿಎಸ್ ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ವರ್ಗಾವಣೆಗೆ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹ
ಸರ್ಕಾರ ವಿಮಾನ ನಿಲ್ದಾಣ ಹೆಸರು ನಾಮಕರಣ ಮಾಡುವಾಗ ಇಬ್ಬಗೆಯ ನೀತಿ ಬೇಡ. ರಾಜಕೀಯ ನಾಯಕರ ಹೆಸರು ಪ್ರಸ್ತಾವನೆ ಬೇಡವಾದರೆ ರಾಷ್ಟ್ರಕವಿ ಕುವೆಂಪು ಹೆಸರಿಡಿ.ಅದರಂತೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ ಸೇನಾನಿ ಸುರಪುರ ಸಂಸ್ಥಾನದ ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ಅವರು ಹೆಸರಿಡಲು ಅವರು ಸಲಹೆ ಮಾಡಿದ್ದಾರೆ.