ಚಿಂಚೋಳಿ ಆರೋಗ್ಯ ಮೇಳ: ಪ್ರತಿಯೊಬ್ಬರು ಆರೋಗ್ಯ ಕಾರ್ಡ್ ಪಡೆಯಲು ಕೇಂದ್ರ ಸಚಿವ ಭಗವಂತ ಖೂಬಾ ಕರೆ

1
132

ಕಲಬುರಗಿ: ಪ್ರತಿಯೊಬ್ಬರು ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಅವರು ಕರೆ ನೀಡಿದರು.

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಪಟ್ಟಣ ಪಂಚಾಯತ ಚಿಂಚೋಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ ತಾಲೂಕಾ ಮಟ್ಟದ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಇದನ್ನೂ ಓದಿ: ಶೋಭಾಯಾತ್ರೆ ಹಿನ್ನೆಲೆ:ಆಳಂದ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ

ಆರೋಗ್ಯ ಕಾರ್ಡ್ ಪಡೆದುಕೊಂಡಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಬಿ.ಪಿ.ಎಲ್. ಕುಟುಂಬದವರು ಉಚಿತ ಮತು ಎ.ಪಿ.ಎಲ್. ಕುಟುಂಬದವರು ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯ ಪಡೆಯಬಹುದಾಗಿದೆ. ಇಂದಿನ ಆರೋಗ್ಯ ಮೇಳದಲ್ಲಿ ತಜ್ಞ ವೈದ್ಯರು ಆಗಮಿಸಿದ್ದು, ತಾಲೂಕಿನ ಜನತೆ ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

2020ರಲ್ಲಿ ಮಹಾಮಾರಿ ಕೋವಿಡ್ ಸೋಂಕು ವ್ಯಾಪಿಸಿದ ನಂತರ ದೇಶದ ಜನ ತುಂಬಾ ಸಂಕಷ್ಟಕ್ಕೀಡಾಗಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದಲ್ಲದೆ ದೇಶದ ಜನತೆಗೆ ತ್ವರಿತಗತಿಯಲ್ಲಿ ಕೋವಿಡ್ ಲಸಿಕೆ ನೀಡುವ ಮೂಲಕ ಸಮರ್ಥವಾಗಿ ನಿಭಾಯಿಸಿದ್ದಾರೆ. ಈಗ 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದ್ದು, ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡಿ ಹೋಗಿ ಲಸಿಕೆ ಕೊಡಿಸಬೇಕು ಎಂದರು.

ಇದನ್ನೂ ಓದಿ: ಶಾಸಕಿ ಕನೀಜ್ ಫಾತೀಮಾ ಅವರಿಂದ ಕಲಬುರಗಿಯಲ್ಲಿ ಸೌಹಾರ್ದ ಇಫ್ತೆಯಾರ್ ಕೂಟ

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಬುರಗಿ ಸಂಸದ ಡಾ.ಉಮೇಶ ಜಾಧವ ಅವರು ಮಾತನಾಡಿ ಪ್ರತಿಯೊಬ್ಬ ನಾಗರಿಕರು ತಮ್ಮ ಆರೋಗ್ಯದ ಸುರಕ್ಷತೆಗೆ ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ಪಡೆದುಕೊಳ್ಳಬೇಕು. ಆರೋಗ್ಯ ಕಾರ್ಡ ಪಡೆಯುವುದರಿಂದ ಬಿ.ಪಿ.ಎಲ್ ಕುಟುಂಬದವರಿಗೆ ವಾರ್ಷಿಕ 5 ಲಕ್ಷ ರೂ. ವರೆಗೆ ಉಚಿತ ಹಾಗೂ ಎ.ಪಿ.ಎಲ್ ಕುಟುಂಬದವರಿಗೆ ವಾರ್ಷಿಕ 1.5 ಲಕ್ಷ ರೂ. ವರೆಗೆ ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಸರ್ಕಾರಿ ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ ಎಂದು ಕಾರ್ಡಿನ ಮಹತ್ವ ತಿಳಿಸಿದ ಅವರು ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ವೈದ್ಯಾಧಿಕಾರಿಗಳು ಮತ್ತು ಅವರ ಸಿಬ್ಬಂದಿ ವರ್ಗ ಹಾಗೂ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದು ಪ್ರಸಂಸೆ ವ್ಯಕ್ತಪಡಿಸಿದರು.

ಆರೋಗ್ಯ ಕಾರ್ಡ್ ವಿತರಣೆ: ಇದೇ ಸಂದರ್ಭದಲ್ಲಿ 361 ಜನರಿಗೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ಮತ್ತು 289 ಜನರಿಗೆ ವ್ಯಕ್ತಿಯ ಆರೋಗ್ಯ ಇತಿಹಾಸ ತಿಳಿಸುವ “ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್” ವಿತರಿಸಲಾಯಿತು.

ಇದನ್ನೂ ಓದಿ: ನನ್ನ ಟ್ವಿಟರ್ ಖಾತೆ ಹ್ಯಾಕ್ ಆಗಿದೆ: ಶಾಸಕ ಪ್ರಿಯಾಂಕ್ ಖರ್ಗೆ

ಶಾಸಕ ಡಾ. ಅವಿನಾಶ ಉಮೇಶ ಜಾಧವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಂಚೋಳಿ ಪುರಸಭೆಯ ಅಧ್ಯಕ್ಷೆ ಜಗದೇವಿ ಗಡಂತಿ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ. ದಿಲೀಷ್ ಸಾಸಿ, ಡಿ.ಹೆಚ್.ಓ. ಡಾ. ಶರಣಬಸಪ್ಪ ಗಣಜಲಖೇಡ, ಡಿ.ಎಲ್.ಓ ಡಾ.ರಾಜಕುಮಾರ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಿರಿಜಾ, ತಹಶೀಲ್ದಾರ ಅಂಜುಮ್ ತಬಸ್ಸುಮ್, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅನೀಲ ರಾಠೋಡ, ತಾಲೂಕಾ ಆರೋಗ್ಯಾಧಿಕಾರಿ ಡಾ. ಮಹ್ಮದ್ ಗಫಾರ್ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

5210 ಜನರ ಆರೋಗ್ಯ ತಪಾಸಣೆ: ಆರೋಗ್ಯ ಮೇಳದಲ್ಲಿ ಸುಮಾರು 5210 ಜನರು ಭಾಗವಹಿಸಿ ತಜ್ಞ ವೈದ್ಯರುಗಳಿಂದ ಆರೋಗ್ಯ ತಪಾಸಣೆ ಮಾಡಿಕೊಂಡರು. ಉಚಿತ ಮಾತೆಗಳನ್ನು ನೀಡಲಾಯಿತು. 450 ಜನರು ಆಯುರ್ವೇದ್ ಮಾತ್ರೆ ಪಡೆದುಕೊಂಡರು.

ಇದನ್ನೂ ಓದಿ: ಪಿಎಸ್ಐ ಆಕ್ರಮ: ಮತ್ತೋರ್ವ ಆರೋಪಿ ಬಂಧನ

ಆರೋಗ್ಯ ತಪಾಸಣೆಯ ಹೈಲೈಟ್ಸ್: ಆರೋಗ್ಯ ಮೇಳದಲ್ಲಿ 297 ಮಹಿಳೆಯರು ಮತ್ತು 124 ಗರ್ಭಿಣಿ ಮಹಿಳೆಯರು ಸ್ತ್ರೀ ರೋಗ ತಜ್ಞರ ಬಳಿ ಆರೋಗ್ಯ ತಪಾಸಣೆಗೆ ಒಳಾಗದರು. 325 ಜನರಿಗೆ ಕುಟುಂಬ ಕಲ್ಯಾಣದ ಯೋಜನೆ ಮತ್ತು 127 ಮಹಿಳೆಯರಿಗೆ ಎದೆ ಹಾಲು ಉಣಿಸುವ ಕುರಿತು ಮಾಹಿತಿ ನೀಡಲಾಯಿತು. ಮಕ್ಕಳ ತಜ್ಞರು 512 ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. 387 ಜನರಿಗೆ ಕಣ್ಣಿನ ತಪಾಸಣೆ ಮಾಡಿ ಅದರಲ್ಲಿ 287 ಜನರಿಗೆ ಕಣ್ಣಿನ ಪೊರೆ (ಕ್ಯಾಟರ್ಯಾಕ್ಟ್) ಶಸ್ತ್ರ ಚಿಕಿತ್ಸೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಯಿತು. 1628 ಜನರು ಸಕ್ಕರೆ ಖಾಯಿಲೆ, ರಕ್ತದೊತ್ತಡ ಸ್ಕ್ರೀನಿಂಗ್‍ಗೆ ಒಳಗಾದರು. 206 ಜನರಿಗೆ ಎಚ್.ಐ.ವಿ ಕುರಿತು ಆಪ್ತ ಸಮಾಲೋಚನೆ ನಡೆಸಲಾಯಿತು. 161 ಜನರಿಗೆ ಟೆಲಿಕನ್ಸ್‍ಲಟೇಷನ್ ಮಾಡಲಾಯಿತು. 104 ಜನರು ಕ್ಯಾನ್ಸರ್, 72 ಜನರು ಹೃದಯ ಕಾಯಿಲೆ, 175 ಜನರು ಅಸ್ತಮಾ, 252 ಜನ ದಂತ, 120 ಜನ ಕಿವಿ, ಮೂಗು ಮತ್ತು ಗಂಟಲು, 82 ಜನ ಚರ್ಮ ಆರೋಗ್ಯ ತಪಾಸಣೆ ಮಾಡಿಕೊಂಡರು. 125 ಜನರಿಗೆ ಇ.ಸಿ.ಜಿ ಮತ್ತು 294 ಜನರಿಗೆ ರಕ್ತ ಪರೀಕ್ಷೆ ಮಾಡಲಾಯಿತು.

158 ಜನರು ಮಾನಸಿಕ ಆರೋಗ್ಯ, 115 ಜನರು ಆರ್.ಟಿ.ಐ/ಎಸ್.ಟಿ.ಡಿ, 77 ಜನರು ಕ್ಷಯ ರೋಗ, 67 ಜನರು ಮಲೇರಿಯಾ ಹಾಗೂ 86 ಜನರು ಕುಷ್ಠರೋಗದ ತಪಾಸಣೆಗೆ ಒಳಗಾದರು.

ಇದನ್ನೂ ಓದಿ: ಸಹಕಾರ ಇಲಾಖೆಯಲ್ಲಿ ಲಂಚಾವತಾರ: ಬೆಚ್ಚಿಬೀಳುವ ಮಾಹಿತಿ ಹೊರಗೆಡವಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಆರೋಗ್ಯ ಇಲಾಖೆಯ ಮಾಹಿತಿ ಶಿಕ್ಷಣ ಸಂವಹನ ವಿಭಾಗದಿಂದ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ವಸ್ತು ಪ್ರದರ್ಶನದ ಮಳಿಗೆ ಹಾಕಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಇದಲ್ಲದೆ ವಿಶ್ವಜ್ಯೋತಿ ಜಾನಪದ ಕಲಾ ತಂಡದ ಕಲಾವಿದರು ಬೀದಿ ನಾಟಕ ಪ್ರದರ್ಶಿಸಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here