ಮೂರ್ನಾಲ್ಕು ತಿಂಗಳಲ್ಲಿ ಯರಗೋಳ್ ಯೋಜನೆ ಪೂರ್ಣ: ಹೆಚ್.ಡಿ.ಕುಮಾರಸ್ವಾಮಿ

  • ಮುಖ್ಯಮಂತ್ರಿ ಜತೆ ಚರ್ಚೆಯ ಭರವಸೆ; ಮುಖ್ಯ ಎಂಜಿನಿಯರ್ ಜತೆ ಚರ್ಚೆ ನಡೆಸಿದ ಮಾಜಿ ಸಿಎಂ
  • 2006ರಲ್ಲೇ ಯೋಜನೆಗೆ 50 ಕೋಟಿ ರೂ. ಅನುದಾನ ಘೋಷಿಸಿದ್ದ ಹೆಚ್‌ಡಿಕೆ
  • ಜನತಾ ಜಲಧಾರೆ; ಯರಗೋಳ್‌ ಡ್ಯಾಂನಲ್ಲಿ ಜಲ ಸಂಗ್ರಹಿಸಿದ ದಳಪತಿ

ಕೋಲಾರ/ಬಂಗಾರಪೇಟೆ: ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್‌ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಯರಗೋಳ್‌ ಜಲಾಶಯದಲ್ಲಿ ಕಳಸಕ್ಕೆ ನೀರು ಸಂಗ್ರಹ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇದನ್ನೂ ಓದಿ: ಬಯಲು ಗ್ರಂಥಾಲಯದ ಪುನರಾರಂಭ, ವಿಶ್ವ ಪುಸ್ತಕ ದಿನಾಚರಣೆ

ಯರಗೋಳ್‌ ಬಹಳ ಉಪಯುಕ್ತವಾದ ಯೋಜನೆ. ಹಲವಾರು ವರ್ಷಗಳಿಂದ ಈ ಭಾಗದ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು. 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ಜಲಾಶಯವನ್ನು ಉದ್ಘಾಟನೆ ಮಾಡಲು ಬಾಗೇಪಲ್ಲಿಗೆ ಹೋಗಿದ್ದೆ. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಯೊಬ್ಬರು ಯರಗೋಳ್‌ ಯೋಜನೆಯ ದುಃಸ್ಥಿತಿಯನ್ನು ನನ್ನ ಗಮನಕ್ಕೆ ತಂದಿದ್ದರು ಎಂದು ಕುಮಾರಸ್ವಾಮಿ ಅವರು ನೆನಪು ಮಾಡಿಕೊಂಡಡರು.

ಅಲ್ಲಿಂದ ಬೆಂಗಳೂರಿಗೆ ವಾಪಸ್‌ ಬಂದ ಮೇಲೆ ಯೋಜನೆಯ ಸಮಗ್ರ ಮಾಹಿತಿಯನ್ನು ತರಿಸಿಕೊಂಡೆ ಪರಿಶೀಲನೆ ನಡೆಸಿದೆ. ಆವರೆಗೆ ಸರಕಾರದಿಂದ ಯೋಜನೆಗೆ ಅನುದಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿತು. ಆಗ ನಾನು ಈ ಯೋಜನೆಗೆ ಬಜೆಟ್‌ʼನಲ್ಲಿ 50 ಕೋಟಿ ರೂ. ಅನುದಾನ ತೆಗೆದಿಟ್ಟಿದ್ದೆ. ಇದಾದ ಮೇಲೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ತಲಾ ಐದು ವರ್ಷ ಸರಕಾರ ಮಾಡಿದ್ದವು. ಆಗಲೂ ಕೆಲಸ ಆಗಲಿಲ್ಲ. ಮತ್ತೆ 14 ತಿಂಗಳು ನಾನು ಸಿಎಂ ಆಗಿದ್ದಾಗ ಸರಿಯಾದ ಮಾಹಿತಿಯನ್ನು ಯಾರೂ ನೀಡಿರಲಿಲ್ಲ. ಒಂದು ವೇಳೆ ತಿಳಿಸಿದ್ದಿದ್ದರೆ ಈ ಹೊತ್ತಿಗೆ ಯೋಜನೆ ಪೂರ್ಣಗೊಳಿಸುತ್ತಿದ್ದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 27 ರಂದು ಗುಲ್ಬರ್ಗ ವಿವಿ ಘಟಿಕೋತ್ಸವಕ್ಕೆ ರಾಜ್ಯಪಾಲರ ಆಗಮನ

ಮುಖ್ಯ ಎಂಜಿನಿಯರ್‌ ಜತೆ ಚರ್ಚೆ: ಯರಗೋಳ್ ಯೋಜನೆಗೆ ಯಾವುದೇ ಕಾನೂನಿನ ತೊಡಕು ಇರಲಿಲ್ಲ. ಆದರೂ ರಾಷ್ಟ್ರೀಯ ಪಕ್ಷಗಳು ಯೋಜನೆಯನ್ನು ಪೂರ್ಣ ಮಾಡಲೇ ಇಲ್ಲ. ಈ ಜಲಾಶಯಕ್ಕೆ ಸಾಕಷ್ಟು ನೀರು ಹರಿದುಬರುತ್ತದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಷ್ಟೇ. ಈ ಬಗ್ಗೆ ನಾನು ಮುಖ್ಯ ಎಂಜಿನಿಯರ್‌ ಸೇರಿ ಸಂಬಂಧಪಟ್ಟ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಜತೆಯೂ ಮಾತನಾಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಣ ಬಿಡುಗಡೆ ಆಗಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. 160 ರಿಂದ 180 ಕೋಟಿ ರೂ. ವೆಚ್ಚದ ಪರಿಷ್ಕೃತ ಅಂದಾಜು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಿದ್ದಾರೆಂಬ ಮಾಹಿತಿ ನೀಡಿದ್ದಾರೆ ಅಧಿಕಾರಿಗಳು. ಆ ಬಗ್ಗೆ ಮುಖ್ಯಮಂತ್ರಿಗಳ ಜತೆಯೂ ಮಾತನಾಡುತ್ತೇನೆ.‌ ಅಲ್ಲದೆ, ಈ ಯೋಜನೆ ಕುರಿತ ಎಲ್ಲ ಮಾಹಿತಿ ತೆಗೆದುಕೊಂಡು ಮುಂದಿನ ವಾರ ನನ್ನ ಭೇಟಿಯಾಗುವಂತೆ ಮುಖ್ಯ ಎಂಜಿನಿಯರ್‌ ಅವರಿಗೆ ಹೇಳಿದ್ದೇನೆ. ಮೂರು ನಾಲ್ಕು ತಿಂಗಳಲ್ಲಿ ಇಡೀ ಯೋಜನೆ ಮುಗಿಯುವುದರ ಬಗ್ಗೆ ಸರಕಾರದ ಗಮನ ಸೆಳೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಚಿಂಚೋಳಿ ಆರೋಗ್ಯ ಮೇಳ: ಪ್ರತಿಯೊಬ್ಬರು ಆರೋಗ್ಯ ಕಾರ್ಡ್ ಪಡೆಯಲು ಕೇಂದ್ರ ಸಚಿವ ಭಗವಂತ ಖೂಬಾ ಕರೆ

ಏನಿದು ಯರಗೋಳ್ ಯೋಜನೆ?: ಕುಡಿಯುವ ನೀರಿನ ಉದ್ದೇಶದ ಯರಗೋಳ್ ಜಲಾಶಯದಲ್ಲಿ 500 ಎಂಸಿಎಫ್ಟಿ ಸಾಮರ್ಥ್ಯದ ನೀರು ಸಂಗ್ರಹಣೆಯಾಗಲಿದೆ. ಡ್ಯಾಂ ತುಂಬಿ ಹರಿದರೆ 375 ಎಕರೆ ಭೂ ಪ್ರದೇಶವು ಮುಳುಗಡೆಯಾಗಲಿದೆ. ಒಮ್ಮೆ ತುಂಬಿದರೆ ಕನಿಷ್ಠ ಎರಡು ವರ್ಷ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ.

ಯರಗೋಳ್ ಡ್ಯಾಂ ನಿರ್ಮಾಣಕ್ಕೆ 375 ಎಕರೆ ಭೂ ಪ್ರದೇಶ ವಶಪಡಿಸಿಕೊಳ್ಳಲಾಗಿದೆ. ರೈತರಿಂದ 95 ಎಕರೆ, ಅರಣ್ಯ ಇಲಾಖೆಯಿಂದ 154 ಎಕರೆ ಮತ್ತು 126 ಎಕರೆ ಸರ್ಕಾರಿ ಭೂ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ಪರಿಹಾರವಾಗಿ ಒಟ್ಟು 5.19 ಕೋಟಿ ರೂ. ಬಿಡುಗಡೆ ಮಾಡಿ ವಿತರಣೆಗೆ ಕೋಲಾರ ಉಪ ಭಾಗಾಧಿಕಾರಿಗಳಿಗೆ ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ.

ಬೆಳೆ ವಿಮೆ ಕಂತು ಕಟ್ಟಿದ ರೈತ​ರಿ​ಗಿಲ್ಲ ಪರಿ​ಹಾ​ರ

ಯರಗೋಳ್ ಅಣೆಕಟ್ಟೆಯನ್ನು ಎರಡು ಬೆಟ್ಟಗಳ ಮಧ್ಯೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದು, 414 ಮೀಟರ್ ಉದ್ದ, 30 ಮೀಟರ್ ಎತ್ತರ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ. ಡ್ಯಾಂ ನಿರ್ಮಾಣ ವೇಳೆಗೆ ನೀರು ಪೂರೈಕೆಗೆ ಅಗತ್ಯ ತಾಂತ್ರಿಕತೆಗಳನ್ನು ಅಳವಡಿಸಲಾಗುವುದೆಂದು ಆಧಿಕಾರಿಗಳು ತಿಳಿಸಿದ್ದಾರೆ.

emedialine

Recent Posts

ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಣೆ

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…

16 mins ago

ಗುಡ್ಡಾಪುರ ದಾನಮ್ಮ ದೇವಿಯ ತೊಟ್ಟಿಲ

ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…

18 mins ago

ಅ.8 ರಂದು ದಸರಾ ಕಾವ್ಯ ಸಂಭ್ರಮ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…

20 mins ago

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…

22 mins ago

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

6 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420